• About
  • Advertise
  • Privacy & Policy
  • Contact
Wednesday, November 18, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಇನ್ಮುಂದೆ ಗದಗದಲ್ಲೂ ಮೊಳಗಲಿದೆ ರಣಜಿ ಕ್ರಿಕೆಟ್ ಸಂಭ್ರಮ; ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ!

Vijaya Sakshi News Desk by Vijaya Sakshi News Desk
November 17, 2026
in Gadag News
ಇನ್ಮುಂದೆ ಗದಗದಲ್ಲೂ ಮೊಳಗಲಿದೆ ರಣಜಿ ಕ್ರಿಕೆಟ್ ಸಂಭ್ರಮ; ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ!
0
SHARES
96
VIEWS
Share on Facebook

ಗದಗ: ಕ್ರಿಕೆಟ್ ಕ್ರೀಡೆ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ರಾಜ್ಯದ ವಿವಿಧ ಭಾಗಗಳ ಪ್ರತಿಭಾವಂತ ಆಟಗಾರರಿಗೂ ಸ್ಥಳೀಯವಾಗಿಯೇ ಉತ್ತಮ ಅವಕಾಶಗಳು ದೊರೆಯಬೇಕು. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಗದಗದಲ್ಲಿಯೂ ರಣಜಿ ಪಂದ್ಯಗಳನ್ನು ಆಯೋಜಿಸುವ ಗುರಿ ಹೊಂದಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷ ವೆಂಕಟೇಶ ಪ್ರಸಾದ್ ತಿಳಿಸಿದರು.

ಮಂಗಳವಾರ ಬೆಟಗೇರಿ ಸಮೀಪದ ನರಸಾಪುರದಲ್ಲಿ ಕೆಎಸ್‌ಸಿಎ ವತಿಯಿಂದ ನಿರ್ಮಿಸಲಿರುವ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಯುವ ಕ್ರಿಕೆಟಿಗರು ಉತ್ತಮ ಅವಕಾಶಗಳಿಗಾಗಿ ಬೆಂಗಳೂರಿಗೆ ತೆರಳುವ ಪರಿಸ್ಥಿತಿ ಇರಬಾರದು. ಸ್ಥಳೀಯವಾಗಿಯೇ ಅಭ್ಯಾಸ ನಡೆಸಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಅಗತ್ಯ ವ್ಯವಸ್ಥೆ ಕಲ್ಪಿಸುವುದು ಕೆಎಸ್‌ಸಿಎ ಉದ್ದೇಶವಾಗಿದೆ. ರಾಜ್ಯದ ವಿವಿಧ ನಗರಗಳಲ್ಲಿ ರಣಜಿ ಪಂದ್ಯಗಳನ್ನು ಆಯೋಜಿಸುವ ಮೂಲಕ ಎಲ್ಲ ಭಾಗಗಳ ಕ್ರಿಕೆಟ್ ಪ್ರತಿಭೆಗಳಿಗೆ ಸಮಾನ ಅವಕಾಶ ನೀಡಲಾಗುವುದು ಎಂದರು.

ಕಳೆದ ವರ್ಷ ರಣಜಿ ಫೈನಲ್ ಪಂದ್ಯವನ್ನು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿತ್ತು. ಈ ಬಾರಿ ಬೆಳಗಾವಿಯಲ್ಲಿ ರಣಜಿ ಟ್ರೋಫಿ ಪಂದ್ಯಗಳು ನಡೆಯಲಿವೆ. ಮುಂದಿನ ದಿನಗಳಲ್ಲಿ ಗದಗದಲ್ಲಿಯೂ ರಣಜಿ ಪಂದ್ಯಗಳನ್ನು ನಡೆಸುವ ಗುರಿ ಹೊಂದಲಾಗಿದೆ. ಇಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವುದರ ಜತೆಗೆ ಪೆವಿಲಿಯನ್, ಅಭ್ಯಾಸ ಅಂಕಣ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಸ್ಥಳೀಯ ಆಟಗಾರರಿಗೆ ತರಬೇತಿ ನೀಡಲು ಕ್ರಿಕೆಟ್ ಅಕಾಡೆಮಿ ಸ್ಥಾಪನೆಗೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಗದಗ ಜಿಲ್ಲೆಯಲ್ಲಿ ಹಲವು ಕ್ರೀಡೆಗಳಿಗೆ ಸೌಲಭ್ಯಗಳಿದ್ದರೂ ಕ್ರಿಕೆಟ್‌ಗೆ ಸೂಕ್ತ ಮೈದಾನದ ಕೊರತೆಯಿತ್ತು. ಇದೀಗ ಬಹುದಿನಗಳ ಬೇಡಿಕೆ ಈಡೇರುತ್ತಿದೆ. 2028ರ ವೇಳೆಗೆ ಗದಗದಲ್ಲಿ ರಣಜಿ ಪಂದ್ಯಗಳು ನಡೆಯುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದರು.

ಕೆಎಸ್‌ಸಿಎ ಗೌರವ ಕಾರ್ಯದರ್ಶಿ ಸಂತೋಷ ಮೆನನ್ ಮಾತನಾಡಿ, ಮೊದಲ ಹಂತದಲ್ಲಿ ₹3 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗಲಿದೆ. ಬಳಿಕ ಹಂತ ಹಂತವಾಗಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಿ ರಣಜಿ ಪಂದ್ಯಗಳ ಆಯೋಜನೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.

ಕೆಎಸ್‌ಸಿಎ ಧಾರವಾಡ ವಲಯ ಸಂಚಾಲಕ ವೀರಣ್ಣ ಸವಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅವಿನಾಶ ವೈದ್ಯ, ಅಲ್ತಾಫ್ ಕಿತ್ತೂರು, ಅನಿರುದ್ಧ ಜೋಶಿ, ವಿಜಯ ವೈದ್ಯ, ವೀರೇಶ ಉಂಡಿ, ಮುನ್ನಾ ಗುಳೇದಗುಡ್ಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಾಸಣ್ಣ ಕುರುಡಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ ಹಾಗೂ ರಂಗಣ್ಣ ಓದುಗೌಡರ ಉಪಸ್ಥಿತರಿದ್ದರು. ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಸ್ವಾಗತಿಸಿದರು.

ನಾನು ಅಪ್ಪಟ ಕನ್ನಡಿಗ, ಕನ್ನಡ ಮಣ್ಣಿನ ಮಗ:

ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಲು ಆರಂಭಿಸಿದ ವೆಂಕಟೇಶ ಪ್ರಸಾದ್ ಅವರಿಗೆ ಸಭಿಕರು ಚಪ್ಪಾಳೆ ತಟ್ಟಿದರು. ಇದನ್ನು ಗಮನಿಸಿದ ಅವರು, “ನೀವು ಯಾವ ಕಾರಣಕ್ಕೆ ಚಪ್ಪಾಳೆ ತಟ್ಟುತ್ತಿದ್ದೀರಿ ಎಂಬುದು ನನಗೆ ಗೊತ್ತು. ನಾನು ಕನ್ನಡದಲ್ಲಿಯೇ ಮಾತನಾಡುತ್ತೇನೆ. ನಾನು ಅಪ್ಪಟ ಕನ್ನಡಿಗ, ಕನ್ನಡ ಮಣ್ಣಿನ ಮಗ” ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿ ಸಭಿಕರ ಮೆಚ್ಚುಗೆಗೆ ಪಾತ್ರರಾದರು.

ಇದೇ ವೇಳೆ, 20 ವರ್ಷಗಳ ಹಿಂದೆ ಸುನೀಲ್ ಜೋಶಿ ಅವರ ಮನೆಗೆ ಭೇಟಿ ನೀಡಿದ್ದೆ. ಆ ಬಳಿಕ ಇದೇ ಮೊದಲ ಬಾರಿಗೆ ಗದಗ ನಗರಕ್ಕೆ ಬರುತ್ತಿದ್ದೇನೆ ಎಂದು ತಮ್ಮ ಹಿಂದಿನ ಭೇಟಿಯ ನೆನಪುಗಳನ್ನು ಹಂಚಿಕೊಂಡರು.

Tags: Gadag Cricket StadiumkannadanewsKarnatakaKSCARanji MatchesRanji TrophyVenkatesh PrasadVijayasakshivijayasakshinews
ShareSendShare
Previous Post

ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ಬೆಂಕಿಗಾಹುತಿ; ವಿದ್ಯುತ್ ತಂತಿ ಅವಘಡಕ್ಕೆ ರೈತನಿಗೆ ಲಕ್ಷಾಂತರ ನಷ್ಟ!

Next Post

IIT ಬಾಂಬೆಯಿಂದ ಗದಗದ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಪ್ರಶಸ್ತಿ; ಒಂದೇ ಬಾರಿ ಒಲಿದ ಎರಡು ಗೌರವ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
IIT ಬಾಂಬೆಯಿಂದ ಗದಗದ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಪ್ರಶಸ್ತಿ; ಒಂದೇ ಬಾರಿ ಒಲಿದ ಎರಡು ಗೌರವ!

IIT ಬಾಂಬೆಯಿಂದ ಗದಗದ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಪ್ರಶಸ್ತಿ; ಒಂದೇ ಬಾರಿ ಒಲಿದ ಎರಡು ಗೌರವ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಚೆನ್ನೈ–ಸಿಂಗಾಪುರ ವಿಮಾನದಲ್ಲಿ 5 ಗಂಟೆಗಳ ಕಾಲ ಸಿಲುಕಿದ 200ಕ್ಕೂ ಹೆಚ್ಚು ಪ್ರಯಾಣಿಕರು

ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ; ನಾಲ್ಕು ನಗರಗಳಿಗೆ ಇಂಡಿಗೋ ವಿಮಾನ ಸಂಚಾರ ಸ್ಥಗಿತ

November 18, 2026
ಕರ್ಣಾಟಕ ಬ್ಯಾಂಕ್‌ನ ಉನ್ನತ ಹುದ್ದೆಗೆ ಕುಂದಾಪುರದ ಉದಯ ಕುಮಾರ್ ಹೆಬ್ಬಾರ್ ಆಯ್ಕೆ!

ಕರ್ಣಾಟಕ ಬ್ಯಾಂಕ್‌ನ ಉನ್ನತ ಹುದ್ದೆಗೆ ಕುಂದಾಪುರದ ಉದಯ ಕುಮಾರ್ ಹೆಬ್ಬಾರ್ ಆಯ್ಕೆ!

November 18, 2026
ತುಂಗಭದ್ರಾ ರೈತರಿಗೆ ಗುಡ್‌ನ್ಯೂಸ್; ನವೆಂಬರ್ 28ರವರೆಗೆ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ!

ತುಂಗಭದ್ರಾ ರೈತರಿಗೆ ಗುಡ್‌ನ್ಯೂಸ್; ನವೆಂಬರ್ 28ರವರೆಗೆ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ!

November 18, 2026
ಬ್ಯಾಂಕ್ ಮುಂದೆ ಮೂರು ದಿನಗಳಿಂದ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ; ವ್ಯಕ್ತಿ ಸಾವು ಹೇಗಾಯ್ತು?

ಬ್ಯಾಂಕ್ ಮುಂದೆ ಮೂರು ದಿನಗಳಿಂದ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ; ವ್ಯಕ್ತಿ ಸಾವು ಹೇಗಾಯ್ತು?

November 18, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಚೆನ್ನೈ–ಸಿಂಗಾಪುರ ವಿಮಾನದಲ್ಲಿ 5 ಗಂಟೆಗಳ ಕಾಲ ಸಿಲುಕಿದ 200ಕ್ಕೂ ಹೆಚ್ಚು ಪ್ರಯಾಣಿಕರು

ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ; ನಾಲ್ಕು ನಗರಗಳಿಗೆ ಇಂಡಿಗೋ ವಿಮಾನ ಸಂಚಾರ ಸ್ಥಗಿತ

November 18, 2026
ಕರ್ಣಾಟಕ ಬ್ಯಾಂಕ್‌ನ ಉನ್ನತ ಹುದ್ದೆಗೆ ಕುಂದಾಪುರದ ಉದಯ ಕುಮಾರ್ ಹೆಬ್ಬಾರ್ ಆಯ್ಕೆ!

ಕರ್ಣಾಟಕ ಬ್ಯಾಂಕ್‌ನ ಉನ್ನತ ಹುದ್ದೆಗೆ ಕುಂದಾಪುರದ ಉದಯ ಕುಮಾರ್ ಹೆಬ್ಬಾರ್ ಆಯ್ಕೆ!

November 18, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper