• About
  • Advertise
  • Privacy & Policy
  • Contact
Monday, November 23, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

ಕರ್ನಾಟಕದ ಬಳಿಕ ದೆಹಲಿಯಲ್ಲೂ ಪ್ರಶಾಂತ್ ಬಾಬುಗೆ ಸಂಕಷ್ಟ; ಬಾಡಿ ವಾರಂಟ್ ಮೂಲಕ ವಶಕ್ಕೆ!

Vijaya Sakshi News Desk by Vijaya Sakshi News Desk
November 23, 2026
in Bengaluru News
ಕರ್ನಾಟಕದ ಬಳಿಕ ದೆಹಲಿಯಲ್ಲೂ ಪ್ರಶಾಂತ್ ಬಾಬುಗೆ ಸಂಕಷ್ಟ; ಬಾಡಿ ವಾರಂಟ್ ಮೂಲಕ ವಶಕ್ಕೆ!
0
SHARES
1
VIEWS
Share on Facebook

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ನಕಲಿ ಔಷಧ ದಂಧೆ ಪ್ರಕರಣದ ಪ್ರಮುಖ ಆರೋಪಿ ಪ್ರಶಾಂತ್ ಬಾಬು ಇದೀಗ ದೆಹಲಿ ಪೊಲೀಸರ ವಶದಲ್ಲಿದ್ದಾನೆ.

ಈಗಾಗಲೇ ಕರ್ನಾಟಕದ ವಿಶೇಷ ತನಿಖಾ ತಂಡ (SIT) ಆತನನ್ನು ಬಂಧಿಸಿತ್ತು. ಇದೀಗ ದೆಹಲಿಯ ಮೋತಿಬಾಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ 2 ಕೋಟಿ ರೂಪಾಯಿ ವಂಚನೆ ಪ್ರಕರಣದ ತನಿಖೆಗಾಗಿ ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆಯಲಾಗಿದೆ.

ಈ ನಡುವೆ, ನಕಲಿ ಔಷಧ ಜಾಲದ ಮತ್ತಷ್ಟು ಅಕ್ರಮಗಳು ತನಿಖೆಯಲ್ಲಿ ಬಯಲಾಗುತ್ತಿವೆ. ಕ್ಯಾನ್ಸರ್ ರೋಗಿಗಳಿಗೆ ಕಂಪನಿಯಿಂದ ಉಚಿತವಾಗಿ ಸಿಗಬೇಕಿದ್ದ ಇಂಜೆಕ್ಷನ್‌ಗಳನ್ನೂ ಹಣ ಪಡೆದು ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ.

ಉಚಿತ ಇಂಜೆಕ್ಷನ್‌ಗಳ ಮಾರಾಟದಿಂದಲೂ ಅಕ್ರಮ ಲಾಭ!

ಕ್ಯಾನ್ಸರ್ ಔಷಧ ಖರೀದಿಯಲ್ಲಿ ಕಂಪನಿಯೊಂದು ವಿಶೇಷ ಕೊಡುಗೆ ನೀಡುತ್ತಿತ್ತು. ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಎರಡು ಇಂಜೆಕ್ಷನ್‌ಗಳನ್ನು ಖರೀದಿಸಿದರೆ ಮತ್ತೊಂದು ಇಂಜೆಕ್ಷನ್ ಉಚಿತವಾಗಿ ನೀಡಲಾಗುತ್ತಿತ್ತು. ಆದರೆ ಈ ಕೊಡುಗೆಯ ಬಗ್ಗೆ ರೋಗಿಗಳಿಗೆ ಮಾಹಿತಿ ನೀಡದೆ, ಉಚಿತವಾಗಿ ಸಿಗುತ್ತಿದ್ದ ಇಂಜೆಕ್ಷನ್‌ಗಳನ್ನೂ ಪ್ರಶಾಂತ್ ಬಾಬು ಹಣಕ್ಕೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಇಷ್ಟೇ ಅಲ್ಲ, ಇಂಜೆಕ್ಷನ್ ಬಳಸಿದ ಬಳಿಕ ರೋಗಿ ಮೃತಪಟ್ಟರೆ ಅವರ ಬಳಿ ಉಳಿದಿದ್ದ ಇಂಜೆಕ್ಷನ್‌ಗಳನ್ನು ವಾಪಸ್ ಪಡೆಯಲಾಗುತ್ತಿತ್ತು. ನಂತರ ಅವುಗಳನ್ನು ಮತ್ತೊಬ್ಬರಿಗೆ ಮೂಲ ಬೆಲೆಗೆ ಮಾರಾಟ ಮಾಡಿ ಲಾಭ ಗಳಿಸಲಾಗುತ್ತಿತ್ತು ಎಂಬ ಆರೋಪವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಆರು ರಾಜ್ಯಗಳಲ್ಲಿ ಔಷಧ ಜಾಲದ ಕಾರ್ಯಾಚರಣೆ!

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಆರು ರಾಜ್ಯಗಳಿಗೆ ಈ ಜಾಲ ವಿಸ್ತರಿಸಿತ್ತು ಎನ್ನಲಾಗಿದೆ. ಹತ್ತಾರು ಖಾಸಗಿ ಆಸ್ಪತ್ರೆಗಳು ಮತ್ತು ನೂರಾರು ಔಷಧ ಮಳಿಗೆಗಳ ಮೂಲಕ ಔಷಧಗಳನ್ನು ಪೂರೈಸಲಾಗುತ್ತಿತ್ತು. ಈ ಜಾಲದಿಂದ 15 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಔಷಧ ಸರಬರಾಜು ಮಾಡಿರುವ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ.

ಇದೀಗ ಎಷ್ಟು ಪ್ರಮಾಣದ ಇಂಜೆಕ್ಷನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ? ಈ ದಂಧೆಯಲ್ಲಿ ಇನ್ನೆಷ್ಟು ಮಂದಿ ಭಾಗಿಯಾಗಿದ್ದಾರೆ? ಎಂಬುದರ ಕುರಿತು ಎಸ್‌ಐಟಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

2 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ದೆಹಲಿ ಪೊಲೀಸರ ತನಿಖೆ:

ಔಷಧ ಪೂರೈಕೆ ಮಾಡುವುದಾಗಿ ನಂಬಿಸಿ 2 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಪ್ರಶಾಂತ್ ಬಾಬು ವಿರುದ್ಧ ದೆಹಲಿಯ ಮೋತಿಬಾಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗಾಗಿ ದೆಹಲಿ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬಾಡಿ ವಾರಂಟ್ ಮೂಲಕ ಆತನನ್ನು ವಶಕ್ಕೆ ಪಡೆದಿದ್ದಾರೆ.

ಸದ್ಯ ದೆಹಲಿ ಪೊಲೀಸರು ವಂಚನೆ ಪ್ರಕರಣದ ಕುರಿತು ವಿಚಾರಣೆ ನಡೆಸುತ್ತಿದ್ದರೆ, ಕರ್ನಾಟಕದ ಎಸ್‌ಐಟಿ ತಂಡ ನಕಲಿ ಔಷಧ ದಂಧೆಯ ಹಿಂದಿರುವ ಸಂಪೂರ್ಣ ಜಾಲವನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದೆ.

Tags: Delhi PoliceFake Drug RacketFake Medicine ScamkannadanewsKarnatakaPrashanth BabuVijayasakshivijayasakshinews
ShareSendShare
Previous Post

ಬಂಗಾರಪೇಟೆ ಗಡಿ ಗ್ರಾಮಗಳಲ್ಲಿ ಕಾಡಾನೆ ಆತಂಕ; ಎರಡು ದಿನಗಳಿಂದ ನಿದ್ದೆಗೆಡಿಸಿದ ಒಂಟಿ ಆನೆ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕರ್ನಾಟಕದ ಬಳಿಕ ದೆಹಲಿಯಲ್ಲೂ ಪ್ರಶಾಂತ್ ಬಾಬುಗೆ ಸಂಕಷ್ಟ; ಬಾಡಿ ವಾರಂಟ್ ಮೂಲಕ ವಶಕ್ಕೆ!

ಕರ್ನಾಟಕದ ಬಳಿಕ ದೆಹಲಿಯಲ್ಲೂ ಪ್ರಶಾಂತ್ ಬಾಬುಗೆ ಸಂಕಷ್ಟ; ಬಾಡಿ ವಾರಂಟ್ ಮೂಲಕ ವಶಕ್ಕೆ!

November 23, 2026
ಬಂಗಾರಪೇಟೆ ಗಡಿ ಗ್ರಾಮಗಳಲ್ಲಿ ಕಾಡಾನೆ ಆತಂಕ; ಎರಡು ದಿನಗಳಿಂದ ನಿದ್ದೆಗೆಡಿಸಿದ ಒಂಟಿ ಆನೆ!

ಬಂಗಾರಪೇಟೆ ಗಡಿ ಗ್ರಾಮಗಳಲ್ಲಿ ಕಾಡಾನೆ ಆತಂಕ; ಎರಡು ದಿನಗಳಿಂದ ನಿದ್ದೆಗೆಡಿಸಿದ ಒಂಟಿ ಆನೆ!

November 23, 2026
ಚಿನ್ನ ಖರೀದಿಸುವವರಿಗೆ ಬಂಪರ್ ಗುಡ್ ನ್ಯೂಸ್! ಬಂಗಾರ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ, ಇಂದಿನ ದರ ಎಷ್ಟಿದೆ ಗೊತ್ತಾ?

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಒಂದೇ ದಿನದಲ್ಲಿ ಗ್ರಾಮ್‌ಗೆ ₹148 ಹೆಚ್ಚಳ! ಬೆಳ್ಳಿ ದರವೂ ಏರಿಕೆ

November 23, 2026
ಮಂತ್ರಾಲಯದಿಂದ ಬೆಂಗಳೂರಿಗೆ ಬರುವಷ್ಟರಲ್ಲಿ ಕೈಕೊಟ್ಟ ಬಸ್; ಪ್ರಯಾಣಿಕರ ಗೋಳು ಕೇಳೋರಿಲ್ಲ!

ಮಂತ್ರಾಲಯದಿಂದ ಬೆಂಗಳೂರಿಗೆ ಬರುವಷ್ಟರಲ್ಲಿ ಕೈಕೊಟ್ಟ ಬಸ್; ಪ್ರಯಾಣಿಕರ ಗೋಳು ಕೇಳೋರಿಲ್ಲ!

November 23, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕರ್ನಾಟಕದ ಬಳಿಕ ದೆಹಲಿಯಲ್ಲೂ ಪ್ರಶಾಂತ್ ಬಾಬುಗೆ ಸಂಕಷ್ಟ; ಬಾಡಿ ವಾರಂಟ್ ಮೂಲಕ ವಶಕ್ಕೆ!

ಕರ್ನಾಟಕದ ಬಳಿಕ ದೆಹಲಿಯಲ್ಲೂ ಪ್ರಶಾಂತ್ ಬಾಬುಗೆ ಸಂಕಷ್ಟ; ಬಾಡಿ ವಾರಂಟ್ ಮೂಲಕ ವಶಕ್ಕೆ!

November 23, 2026
ಬಂಗಾರಪೇಟೆ ಗಡಿ ಗ್ರಾಮಗಳಲ್ಲಿ ಕಾಡಾನೆ ಆತಂಕ; ಎರಡು ದಿನಗಳಿಂದ ನಿದ್ದೆಗೆಡಿಸಿದ ಒಂಟಿ ಆನೆ!

ಬಂಗಾರಪೇಟೆ ಗಡಿ ಗ್ರಾಮಗಳಲ್ಲಿ ಕಾಡಾನೆ ಆತಂಕ; ಎರಡು ದಿನಗಳಿಂದ ನಿದ್ದೆಗೆಡಿಸಿದ ಒಂಟಿ ಆನೆ!

November 23, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper