ಬೆಂಗಳೂರು: ರಾಜ್ಯಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಿಸುವ ಉದ್ದೇಶದಿಂದ ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಪ್ರವಾಸದ ಭಾಗವಾಗಿ ಜಪಾನ್ನ ವಿಶ್ವಪ್ರಸಿದ್ಧ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದ್ದಾರೆ.
ಟೋಕಿಯೋದಿಂದ ನಗೋಯಾ ನಗರಕ್ಕೆ ಬುಲೆಟ್ ರೈಲಿನಲ್ಲಿ ತೆರಳಿದ್ದು, ಸಚಿವ ಎಂ.ಬಿ. ಪಾಟೀಲ್ ಸೇರಿದಂತೆ ಉನ್ನತ ಮಟ್ಟದ ನಿಯೋಗ ಅವರೊಂದಿಗೆ ಇತ್ತು.
ನಗೋಯಾ ತಲುಪಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಾಗತಿಕ ವಾಹನ ತಯಾರಿಕಾ ಸಂಸ್ಥೆ ಟೊಯೋಟಾ ಕಂಪನಿಯ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳು ಹಾಗೂ ಉದ್ಯೋಗ ಸೃಷ್ಟಿಯ ಸಾಧ್ಯತೆಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.
ಜಪಾನ್ನಲ್ಲಿ ಮುಖ್ಯಮಂತ್ರಿ ಹಾಗೂ ಅವರ ನಿಯೋಗಕ್ಕೆ ಅದ್ದೂರಿ ಸ್ವಾಗತ ದೊರೆತಿದೆ. ರಾಜ್ಯಕ್ಕೆ ಹೊಸ ಬಂಡವಾಳ ಹೂಡಿಕೆಗಳನ್ನು ಸೆಳೆಯುವುದರ ಜೊತೆಗೆ ಕರ್ನಾಟಕ ಮತ್ತು ಜಪಾನ್ ನಡುವಿನ ಆರ್ಥಿಕ ಹಾಗೂ ತಾಂತ್ರಿಕ ಸಹಕಾರವನ್ನು ಮತ್ತಷ್ಟು ಬಲಪಡಿಸುವುದು ಈ ಪ್ರವಾಸದ ಪ್ರಮುಖ ಉದ್ದೇಶವಾಗಿದೆ.










