• About
  • Advertise
  • Privacy & Policy
  • Contact
Tuesday, November 24, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

KRS ಡ್ಯಾಂನಿಂದ ತಮಿಳುನಾಡಿಗೆ ದಿಢೀರ್ ನೀರು ಬಿಡುಗಡೆ ಹೆಚ್ಚಳ; ಬೆಂಗಳೂರು, ಮೈಸೂರಿಗೆ ಕುಡಿಯುವ ನೀರಿನ ಆತಂಕ!

Vijaya Sakshi News Desk by Vijaya Sakshi News Desk
November 24, 2026
in Karnataka News
ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರ ನೀರು; ಬರಿದಾಗುತ್ತಿವೆ ಜಲಾಶಯಗಳು
0
SHARES
2
VIEWS
Share on Facebook

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆಯಿಂದ ನೀರಿನ ಅಭಾವ ಎದುರಾಗಿರುವ ಬೆನ್ನಲ್ಲೇ, ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಪರಿಣಾಮ, ಜಲಾಶಯದಿಂದ ಹೊರಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಏಕಾಏಕಿ ಹೆಚ್ಚಳವಾಗಿದೆ. ಸರ್ಕಾರದ ಈ ನಿರ್ಧಾರ ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕವೂ ಹೆಚ್ಚಾಗಿದೆ.

ನಿನ್ನೆಯಷ್ಟೇ ಕುಡಿಯುವ ನೀರು ಹಾಗೂ ಸ್ಥಳೀಯ ನಾಲೆಗಳಿಗಾಗಿ ಕೆಆರ್‌ಎಸ್ ಡ್ಯಾಂನಿಂದ 3,834 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿತ್ತು. ಆದರೆ ಇಂದು ಹೊರಹರಿವಿನ ಪ್ರಮಾಣವನ್ನು 5,333 ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ. ಅಂದರೆ ಹಿಂದಿನ ದಿನಕ್ಕೆ ಹೋಲಿಸಿದರೆ ಸುಮಾರು 1,500 ಕ್ಯೂಸೆಕ್‌ನಷ್ಟು ಹೆಚ್ಚುವರಿ ನೀರು ಬಿಡುಗಡೆಯಾಗುತ್ತಿದೆ.

ಕಾವೇರಿ ಪ್ರಾಧಿಕಾರದ ಸಭೆಗೂ ಮುನ್ನವೇ ನೀರು ಬಿಡುಗಡೆ!

ಕಳೆದ ಎರಡು ದಿನಗಳ ಹಿಂದೆಯಷ್ಟೇ ಕಾವೇರಿ ನೀರು ನಿಯಂತ್ರಣ ಸಮಿತಿಯು ಮುಂದಿನ 15 ದಿನಗಳ ಕಾಲ ಪ್ರತಿದಿನ 2,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿತ್ತು. ಈ ಆದೇಶದ ಕುರಿತು ನಾಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮಹತ್ವದ ಸಭೆ ನಡೆಸಲಿದೆ. ಆದರೆ ಸಭೆ ನಡೆಯುವ ಮೊದಲೇ ತಮಿಳುನಾಡಿಗೆ ನೀರು ಹರಿಸಲು ಸರ್ಕಾರ ಮುಂದಾಗಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಕೆಆರ್‌ಎಸ್ ಡ್ಯಾಂಗೆ ಒಳಹರಿವು ಸಂಪೂರ್ಣ ಕುಸಿತ:

ಇನ್ನೊಂದೆಡೆ, ಕೆಆರ್‌ಎಸ್ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಿದೆ. ಇಂದು ಕೇವಲ 483 ಕ್ಯೂಸೆಕ್ ನೀರು ಮಾತ್ರ ಜಲಾಶಯಕ್ಕೆ ಹರಿದುಬರುತ್ತಿದೆ. ಜಲಾಶಯದ ನೀರಿನ ಮಟ್ಟವೂ ಕುಸಿತ ಕಂಡಿದ್ದು, ಪ್ರಸ್ತುತ 26.24 ಅಡಿಗಳಷ್ಟಿದೆ.

ಬೆಂಗಳೂರು, ಮೈಸೂರಿಗೂ ಕುಡಿಯುವ ನೀರಿನ ಆತಂಕ!

ಸದ್ಯ ಕೆಆರ್‌ಎಸ್ ಜಲಾಶಯದಲ್ಲಿ ಒಟ್ಟು 20.006 ಟಿಎಂಸಿ ನೀರು ಸಂಗ್ರಹವಿದೆ. ಆದರೆ ಇದರಲ್ಲಿ ಬಳಕೆಗೆ ಯೋಗ್ಯವಾಗಿರುವುದು ಕೇವಲ 13 ಟಿಎಂಸಿ ನೀರು ಮಾತ್ರ ಎಂದು ತಿಳಿದುಬಂದಿದೆ.

ಬೇಸಿಗೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಜಲಾಶಯದಲ್ಲಿ ಬಳಕೆಗೆ ಯೋಗ್ಯವಾದ ನೀರಿನ ಪ್ರಮಾಣ ಕಡಿಮೆ ಇರುವುದು ಆತಂಕ ಮೂಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರು, ಮೈಸೂರು ಸೇರಿದಂತೆ ಕಾವೇರಿ ನದಿ ಪಾತ್ರದ ನಗರಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂಬ ಭೀತಿ ಕಾಡುತ್ತಿದೆ.

ಒಂದೆಡೆ ಮಳೆಯ ಕೊರತೆ, ಮತ್ತೊಂದೆಡೆ ಜಲಾಶಯದ ಒಳಹರಿವಿನಲ್ಲಿ ಇಳಿಕೆ. ಇಂತಹ ಸಂಕಷ್ಟದ ನಡುವೆಯೇ ನೀರು ಬಿಡುಗಡೆ ಹೆಚ್ಚಿಸಿರುವ ಸರ್ಕಾರದ ನಿರ್ಧಾರ ಇದೀಗ ರೈತರು ಹಾಗೂ ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ.

Tags: cauvery waterkannadanewsKarnatakakarnataka newsKRS DamKRS Water LevelTamil NaduVijayasakshivijayasakshinews
ShareSendShare
Previous Post

ಸರ್ಕಾರಿ ಜಾಗದಲ್ಲೇ ಗಾಂಜಾ ಬೆಳೆ! 25 ಸಸಿ ಪತ್ತೆ

Next Post

ಶಾಲಾ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ; ನಾಲ್ವರು ಮಕ್ಕಳು ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಶಾಲಾ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ; ನಾಲ್ವರು ಮಕ್ಕಳು ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ!

ಶಾಲಾ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ; ನಾಲ್ವರು ಮಕ್ಕಳು ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶಾಲಾ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ; ನಾಲ್ವರು ಮಕ್ಕಳು ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ!

ಶಾಲಾ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ; ನಾಲ್ವರು ಮಕ್ಕಳು ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ!

November 24, 2026
ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರ ನೀರು; ಬರಿದಾಗುತ್ತಿವೆ ಜಲಾಶಯಗಳು

KRS ಡ್ಯಾಂನಿಂದ ತಮಿಳುನಾಡಿಗೆ ದಿಢೀರ್ ನೀರು ಬಿಡುಗಡೆ ಹೆಚ್ಚಳ; ಬೆಂಗಳೂರು, ಮೈಸೂರಿಗೆ ಕುಡಿಯುವ ನೀರಿನ ಆತಂಕ!

November 24, 2026
ಸರ್ಕಾರಿ ಜಾಗದಲ್ಲೇ ಗಾಂಜಾ ಬೆಳೆ! 25 ಸಸಿ ಪತ್ತೆ

ಸರ್ಕಾರಿ ಜಾಗದಲ್ಲೇ ಗಾಂಜಾ ಬೆಳೆ! 25 ಸಸಿ ಪತ್ತೆ

November 24, 2026
ಥಿಯೇಟರ್ ಬಳಿಕ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾದ ‘ಸೀನ್’! ರಿಲೀಸ್ ಡೇಟ್ ಯಾವಾಗ?

ಥಿಯೇಟರ್ ಬಳಿಕ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾದ ‘ಸೀನ್’! ರಿಲೀಸ್ ಡೇಟ್ ಯಾವಾಗ?

November 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶಾಲಾ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ; ನಾಲ್ವರು ಮಕ್ಕಳು ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ!

ಶಾಲಾ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ; ನಾಲ್ವರು ಮಕ್ಕಳು ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ!

November 24, 2026
ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರ ನೀರು; ಬರಿದಾಗುತ್ತಿವೆ ಜಲಾಶಯಗಳು

KRS ಡ್ಯಾಂನಿಂದ ತಮಿಳುನಾಡಿಗೆ ದಿಢೀರ್ ನೀರು ಬಿಡುಗಡೆ ಹೆಚ್ಚಳ; ಬೆಂಗಳೂರು, ಮೈಸೂರಿಗೆ ಕುಡಿಯುವ ನೀರಿನ ಆತಂಕ!

November 24, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper