• About
  • Advertise
  • Privacy & Policy
  • Contact
Tuesday, November 24, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಹೆಚ್.ಡಿ. ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ʼನಿಂದ ನೋಟಿಸ್! ಯಾಕೆ ಗೊತ್ತಾ..?

Vijaya Sakshi News Desk by Vijaya Sakshi News Desk
November 24, 2026
in Karnataka News
ಹೆಚ್.ಡಿ. ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ʼನಿಂದ ನೋಟಿಸ್! ಯಾಕೆ ಗೊತ್ತಾ..?
0
SHARES
1
VIEWS
Share on Facebook

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕಚೇರಿಯ ಲಂಚದ ವಾಟ್ಸ್‌ಆ್ಯಪ್ ಚಾಟ್ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. 75 ಲಕ್ಷ ರೂಪಾಯಿ ಲಂಚದ ಆರೋಪ ಮಾಡಿ ವಾಟ್ಸ್‌ಆ್ಯಪ್ ಚಾಟ್ ಬಹಿರಂಗಪಡಿಸಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಪೊಲೀಸರಿಂದ ನೋಟಿಸ್ ಜಾರಿಯಾಗಿದೆ. ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ಆಪ್ತ ಸಹಾಯಕ ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಈ ನೋಟಿಸ್ ನೀಡಿದ್ದಾರೆ.

ಕಳೆದ ನವೆಂಬರ್ 8ರಂದು ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಹೆಚ್.ಡಿ. ಕುಮಾರಸ್ವಾಮಿ, ಜಿಲ್ಲಾಡಳಿತದಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು 75 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದರು.

ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಆಪ್ತ ಸಹಾಯಕ ಶಶಿಕಿರಣ್ ಮತ್ತು ಮಧ್ಯವರ್ತಿಯೊಬ್ಬರ ನಡುವೆ ನಡೆದಿದೆ ಎನ್ನಲಾದ ವಾಟ್ಸ್‌ಆ್ಯಪ್ ಚಾಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು. ಈ ಪ್ರಕರಣದ ಬಗ್ಗೆ ಸರ್ಕಾರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದೂ ಒತ್ತಾಯಿಸಿದ್ದರು.

ಆದರೆ, ಕುಮಾರಸ್ವಾಮಿ ಅವರ ಆರೋಪಗಳನ್ನು ತಳ್ಳಿಹಾಕಿದ್ದ ಜಿಲ್ಲಾಧಿಕಾರಿ ಆಪ್ತ ಸಹಾಯಕ ಶಶಿಕಿರಣ್, ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸ್‌ಆ್ಯಪ್ ಚಾಟ್ ಸೃಷ್ಟಿಸಿ ವೈರಲ್ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಈ ಸಂಬಂಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಕಲಂ 335 ಮತ್ತು 336(4) ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಇದೀಗ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ವೈರಲ್ ಆಗಿರುವ ಚಾಟ್‌ನ ಮೂಲ ಹಾಗೂ ಅದರ ಸೃಷ್ಟಿಯ ಹಿಂದಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸೈಬರ್ ಕಮಾಂಡ್ ಸೆಂಟರ್ ಮೂಲಕ ನೋಟಿಸ್ ಜಾರಿಗೊಳಿಸಲಾಗಿದೆ.

ಒಟ್ಟಿನಲ್ಲಿ, ಹಾಸನ ಜಿಲ್ಲಾಡಳಿತದಲ್ಲಿ ನಡೆದಿದೆ ಎನ್ನಲಾದ 75 ಲಕ್ಷ ರೂಪಾಯಿ ಲಂಚದ ಆರೋಪ ಮತ್ತು ನಕಲಿ ವಾಟ್ಸ್‌ಆ್ಯಪ್ ಚಾಟ್ ಪ್ರಕರಣ ಇದೀಗ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ. ಪೊಲೀಸರ ತನಿಖೆಯಲ್ಲಿ ಮುಂದೇನು ಬಹಿರಂಗವಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

Tags: BreakingNewsHassan NewsHD KumaraswamyKarnatakakarnataka politicsNewsHeadlinesVijayasakshivijayasakshinewsWhatsApp Chat Case
ShareSendShare
Previous Post

ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್; ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಹೆಚ್.ಡಿ. ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ʼನಿಂದ ನೋಟಿಸ್! ಯಾಕೆ ಗೊತ್ತಾ..?

ಹೆಚ್.ಡಿ. ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ʼನಿಂದ ನೋಟಿಸ್! ಯಾಕೆ ಗೊತ್ತಾ..?

November 24, 2026
ಮಹದಾಯಿ ವಿವಾದ: ಗೋವಾ ಸಿಎಂ ಹೇಳಿಕೆ ವಿರುದ್ಧ ಸಚಿವ ಈಶ್ವರ್ ಖಂಡ್ರೆ ಆಕ್ರೋಶ

ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್; ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ

November 24, 2026
ಸಾಕ್ಷಿಗೆ ಬೆದರಿಕೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಶಾಕ್: ಪಟ್ಟಣಗೆರೆ ಶೆಡ್ʼನ ಇಬ್ಬರು ಕೆಲಸಗಾರರು ಕೋರ್ಟ್ʼನಲ್ಲಿ ಉಲ್ಟಾ

November 24, 2026
ಜಪಾನ್ʼನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಡಿಕೆಶಿ: ಪ್ರತಿಭಟನೆ ಹಿಂಪಡೆಯುವಂತೆ ಸಿಎಂ ಮನವಿ

ಜಪಾನ್ʼನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಡಿಕೆಶಿ: ಪ್ರತಿಭಟನೆ ಹಿಂಪಡೆಯುವಂತೆ ಸಿಎಂ ಮನವಿ

November 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಹೆಚ್.ಡಿ. ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ʼನಿಂದ ನೋಟಿಸ್! ಯಾಕೆ ಗೊತ್ತಾ..?

ಹೆಚ್.ಡಿ. ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ʼನಿಂದ ನೋಟಿಸ್! ಯಾಕೆ ಗೊತ್ತಾ..?

November 24, 2026
ಮಹದಾಯಿ ವಿವಾದ: ಗೋವಾ ಸಿಎಂ ಹೇಳಿಕೆ ವಿರುದ್ಧ ಸಚಿವ ಈಶ್ವರ್ ಖಂಡ್ರೆ ಆಕ್ರೋಶ

ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್; ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ

November 24, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper