• About
  • Advertise
  • Privacy & Policy
  • Contact
Thursday, November 26, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಗದಗದ ಚಿತ್ರಣ ಬದಲಿಸಲು ಎಚ್.ಕೆ. ಪಾಟೀಲರ ಮಾಸ್ಟರ್ ಪ್ಲ್ಯಾನ್!

Vijaya Sakshi News Desk by Vijaya Sakshi News Desk
November 26, 2026
in Gadag News
ಗದಗದ ಚಿತ್ರಣ ಬದಲಿಸಲು ಎಚ್.ಕೆ. ಪಾಟೀಲರ ಮಾಸ್ಟರ್ ಪ್ಲ್ಯಾನ್!
0
SHARES
46
VIEWS
Share on Facebook

ವೈಜ್ಞಾನಿಕ ನಗರ ನಿರ್ಮಾಣಕ್ಕೆ ಸಚಿವ ರಾಯರಡ್ಡಿ ಚಾಲನೆ: ₹27 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಗದಗ: ಗದಗ-ಬೆಟಗೇರಿ ನಗರವನ್ನು ಸುಂದರ, ಸುಸಜ್ಜಿತ ಹಾಗೂ ಮಾದರಿ ನಗರವನ್ನಾಗಿಸುವ ನಿಟ್ಟಿನಲ್ಲಿ ಶಾಸಕ ಎಚ್.ಕೆ. ಪಾಟೀಲ ಅವರ ದೂರದೃಷ್ಟಿಯ ಯೋಜನೆಗಳಿಗೆ ಮತ್ತಷ್ಟು ಬಲ ದೊರೆತಿದೆ. ನಗರದ ಅಭಿವೃದ್ಧಿಯ ಬಹುದಿನಗಳ ಕನಸಿಗೆ ಸಾಕಾರ ರೂಪ ನೀಡುವ ಉದ್ದೇಶದಿಂದ ವಸತಿ ವಿನ್ಯಾಸ, ಉದ್ಯಾನವನಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಕಚೇರಿ ನಿರ್ಮಾಣ ಸೇರಿದಂತೆ ಅಂದಾಜು ₹27 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಬುಧವಾರ ಚಾಲನೆ ನೀಡಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಬಾಡರ ಲೇಔಟ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ, ಗದಗ-ಬೆಟಗೇರಿ ನಗರವನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿ ಸುಂದರ ಹಾಗೂ ಮಾದರಿ ನಗರವನ್ನಾಗಿಸುವ ಸಂಕಲ್ಪ ಹೊಂದಲಾಗಿದೆ. ನಗರೀಕರಣ ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿದಂತೆ ಮೂಲಸೌಕರ್ಯಗಳನ್ನು ವೈಜ್ಞಾನಿಕವಾಗಿ ರೂಪಿಸುವುದು ಅಗತ್ಯವಾಗಿದೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ರಿಯಾಯಿತಿ ದರದಲ್ಲಿ ಜನರಿಗೆ ಒದಗಿಸುವ ಯೋಜನೆ ಉತ್ತಮ ಕಾರ್ಯವಾಗಿದೆ. ನಗರಗಳ ಬೆಳವಣಿಗೆಗೆ ಅನುಗುಣವಾಗಿ ವ್ಯವಸ್ಥಿತ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು. ಗದಗ ಜಿಲ್ಲೆಗೆ ಮಾಲಿನ್ಯರಹಿತ ಕೈಗಾರಿಕೆಗಳನ್ನು ಆಕರ್ಷಿಸುವ ಮೂಲಕ ಆರ್ಥಿಕ ಅಭಿವೃದ್ಧಿಗೆ ವೇಗ ನೀಡಬೇಕಿದೆ. ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸೂಕ್ತ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಮತ್ತು ಬಡವರು ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಬರದಿಂದ ಸುಮಾರು ₹60 ಸಾವಿರ ಕೋಟಿ ನಷ್ಟ ಉಂಟಾಗಿದ್ದರೂ ಕೇಂದ್ರ ಸರ್ಕಾರದಿಂದ ಈವರೆಗೆ ಪರಿಹಾರ ಅನುದಾನ ಬಿಡುಗಡೆಯಾಗಿಲ್ಲ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬರಗಾಲದ ಸಂಕಷ್ಟದಲ್ಲಿ ಬಡ ಕುಟುಂಬಗಳಿಗೆ ನೆರವಾಗಿವೆ ಎಂದರು.

ಅಧಿಕಾರಿಗಳು ಜನರೊಂದಿಗೆ ಗೌರವಯುತವಾಗಿ ನಡೆದುಕೊಂಡು, ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಕರ್ತವ್ಯ ನಿರ್ಲಕ್ಷ್ಯ ಅಥವಾ ಲೋಪ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಗದಗದ ಅಭಿವೃದ್ಧಿಗೆ ಹೊಸ ವೇಗ: ಎಚ್.ಕೆ. ಪಾಟೀಲ

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಗದಗ ನಗರದಲ್ಲಿ ಸುಸಜ್ಜಿತ ವಸತಿ ವಿನ್ಯಾಸ ನಿರ್ಮಿಸಬೇಕೆಂಬ ಬಹುದಿನಗಳ ಕನಸು ಇಂದು ಸಾಕಾರಗೊಳ್ಳುತ್ತಿದೆ. 18.19 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲು ₹19.69 ಕೋಟಿ ವೆಚ್ಚದ ಯೋಜನೆ ರೂಪಿಸಿ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಕಚೇರಿ ಕಟ್ಟಡವನ್ನು ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಹಾಗೂ ಸುಮಾರು 18 ಉದ್ಯಾನವನಗಳನ್ನು ₹4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಚಾಲನೆ ನೀಡಲಾಗಿದೆ. ಈ ಎಲ್ಲ ಕಾಮಗಾರಿಗಳು ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.

ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಹಾಗೂ ಪ್ರದರ್ಶನ ಪ್ರಾಧಿಕಾರದ ಮೂಲಕ 32 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಗೃಹ ಮಂಡಳಿಯಿಂದಲೂ ಈ ಪ್ರದೇಶದ ಅಭಿವೃದ್ಧಿಗೆ ಪ್ರಯತ್ನಗಳು ನಡೆಯುತ್ತಿವೆ ಎಂದರು.

ಗದಗ ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ₹59 ಕೋಟಿ ವೆಚ್ಚದ ಪೈಪ್‌ಲೈನ್ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಓವರ್‌ಹೆಡ್ ಟ್ಯಾಂಕ್ ಹಾಗೂ ಇತರ ಮೂಲಸೌಕರ್ಯಗಳ ನಿರ್ಮಾಣಕ್ಕೆ ₹29 ಕೋಟಿ ಅನುದಾನ ಬಿಡುಗಡೆಯಾಗಿದೆ. ಪಾಪನಾಶಿ ಪ್ರದೇಶದಲ್ಲಿ ₹21 ಕೋಟಿ ವೆಚ್ಚದ ನೀರು ಸಂಗ್ರಹಣಾ ಯೋಜನೆಯ ಕಾಮಗಾರಿ ಜನವರಿಯಲ್ಲಿ ಆರಂಭವಾಗಲಿದೆ. ಈ ಎಲ್ಲ ಕಾಮಗಾರಿಗಳು ಪೂರ್ಣಗೊಂಡ ಬಳಿಕ 2027ರ ಅಂತ್ಯದ ವೇಳೆಗೆ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವ ನಿರೀಕ್ಷೆಯಿದೆ ಎಂದು ಎಚ್.ಕೆ.ಪಾಟೀಲ ತಿಳಿಸಿದರು.

ಗದಗ ನಗರವನ್ನು ಪ್ರವಾಸೋದ್ಯಮದ ದೃಷ್ಟಿಯಿಂದಲೂ ಅಭಿವೃದ್ಧಿಪಡಿಸಬೇಕು. ಕುಮಾರವ್ಯಾಸನ ನೆನಪಿನೊಂದಿಗೆ ಪ್ರವಾಸಿಗರು ಗದಗಕ್ಕೆ ಆಗಮಿಸುವಂತಾಗಬೇಕು. ಐತಿಹಾಸಿಕ ಜುಮ್ಮಾ ಮಸೀದಿ ಹಾಗೂ ತ್ರಿಕೂಟೇಶ್ವರ ದೇವಸ್ಥಾನಗಳಿಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುವಂತೆ ನಗರಾಭಿವೃದ್ಧಿ ಪ್ರಾಧಿಕಾರ ಗಮನಹರಿಸಬೇಕು ಎಂದರು.

ಪ್ರಾಧಿಕಾರದ ಆಯುಕ್ತ ಎಸ್.ಸಿ. ಬೇವೂರ ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರ್ ನಿರೂಪಿಸಿದರು.

ಸಮಾರಂಭದಲ್ಲಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಪಂ ಸಿಇಒ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್, ಮಾಜಿ ಜಿಪಂ ಅಧ್ಯಕ್ಷರಾದ ವಾಸಣ್ಣ ಕುರಡಗಿ, ಸಿದ್ದು ಪಾಟೀಲ, ಪ್ರಾಧಿಕಾರದ ಸದಸ್ಯರು ಹಾಗೂ ನಗರಸಭೆ ಸದಸ್ಯರು ಉಪಸ್ಥಿತರಿದ್ದರು.

ಗದಗ ನಗರವನ್ನು ಸುಂದರ ಹಾಗೂ ಸುಸಜ್ಜಿತ ನಗರವನ್ನಾಗಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಯೋಜನೆಗಳ ಮೂಲಕ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಕೈಗೆತ್ತಿಕೊಂಡಿರುವ ಕಾಮಗಾರಿಗಳು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು.

— ಎಚ್.ಕೆ. ಪಾಟೀಲ, ಶಾಸಕ

Tags: Basavaraj RayareddyGadag BetageriGadag Developmentgadag newsGadag ProjectsGadag Urban Development Authorityhk patilInfrastructure Developmentkarnataka newskarnataka politicsScientific CitySmart City DevelopmentUrban DevelopmentVijayasakshi
ShareSendShare
Previous Post

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ; ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ, 20ಕ್ಕೂ ಹೆಚ್ಚು ಮಂದಿಗೆ ಗಾಯ!

Next Post

22ರ ಹರೆಯದಲ್ಲೇ ಹೃದಯಾಘಾತ: ಕಾನೂನು ಪದವಿ ಕನಸು ಕಾಣುತ್ತಿದ್ದ ಯುವಕ ಇನ್ನಿಲ್ಲ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
22ರ ಹರೆಯದಲ್ಲೇ ಹೃದಯಾಘಾತ: ಕಾನೂನು ಪದವಿ ಕನಸು ಕಾಣುತ್ತಿದ್ದ ಯುವಕ ಇನ್ನಿಲ್ಲ

22ರ ಹರೆಯದಲ್ಲೇ ಹೃದಯಾಘಾತ: ಕಾನೂನು ಪದವಿ ಕನಸು ಕಾಣುತ್ತಿದ್ದ ಯುವಕ ಇನ್ನಿಲ್ಲ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
22ರ ಹರೆಯದಲ್ಲೇ ಹೃದಯಾಘಾತ: ಕಾನೂನು ಪದವಿ ಕನಸು ಕಾಣುತ್ತಿದ್ದ ಯುವಕ ಇನ್ನಿಲ್ಲ

22ರ ಹರೆಯದಲ್ಲೇ ಹೃದಯಾಘಾತ: ಕಾನೂನು ಪದವಿ ಕನಸು ಕಾಣುತ್ತಿದ್ದ ಯುವಕ ಇನ್ನಿಲ್ಲ

November 26, 2026
ಗದಗದ ಚಿತ್ರಣ ಬದಲಿಸಲು ಎಚ್.ಕೆ. ಪಾಟೀಲರ ಮಾಸ್ಟರ್ ಪ್ಲ್ಯಾನ್!

ಗದಗದ ಚಿತ್ರಣ ಬದಲಿಸಲು ಎಚ್.ಕೆ. ಪಾಟೀಲರ ಮಾಸ್ಟರ್ ಪ್ಲ್ಯಾನ್!

November 26, 2026
ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ; ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ, 20ಕ್ಕೂ ಹೆಚ್ಚು ಮಂದಿಗೆ ಗಾಯ!

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ; ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ, 20ಕ್ಕೂ ಹೆಚ್ಚು ಮಂದಿಗೆ ಗಾಯ!

November 26, 2026
ಚಳಿಗಾಲದಲ್ಲಿ ಕೂದಲು ಉದುರುವಿಕೆ ಹೆಚ್ಚಾಗುತ್ತಿದೆಯೇ? ಕೂದಲಿನ ಆರೋಗ್ಯ ಕಾಪಾಡಲು ಈ 5 ಸಲಹೆ ಪಾಲಿಸಿ

ಚಳಿಗಾಲದಲ್ಲಿ ಕೂದಲು ಉದುರುವಿಕೆ ಹೆಚ್ಚಾಗುತ್ತಿದೆಯೇ? ಕೂದಲಿನ ಆರೋಗ್ಯ ಕಾಪಾಡಲು ಈ 5 ಸಲಹೆ ಪಾಲಿಸಿ

November 26, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

22ರ ಹರೆಯದಲ್ಲೇ ಹೃದಯಾಘಾತ: ಕಾನೂನು ಪದವಿ ಕನಸು ಕಾಣುತ್ತಿದ್ದ ಯುವಕ ಇನ್ನಿಲ್ಲ

22ರ ಹರೆಯದಲ್ಲೇ ಹೃದಯಾಘಾತ: ಕಾನೂನು ಪದವಿ ಕನಸು ಕಾಣುತ್ತಿದ್ದ ಯುವಕ ಇನ್ನಿಲ್ಲ

November 26, 2026
ಗದಗದ ಚಿತ್ರಣ ಬದಲಿಸಲು ಎಚ್.ಕೆ. ಪಾಟೀಲರ ಮಾಸ್ಟರ್ ಪ್ಲ್ಯಾನ್!

ಗದಗದ ಚಿತ್ರಣ ಬದಲಿಸಲು ಎಚ್.ಕೆ. ಪಾಟೀಲರ ಮಾಸ್ಟರ್ ಪ್ಲ್ಯಾನ್!

November 26, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper