ಚಿಕ್ಕಮಗಳೂರು: ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ಅವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಭೇಟಿ ನೀಡಿ ಶ್ರೀ ಶಾರದಾಂಬೆ ದೇವಿಯ ದರ್ಶನ ಪಡೆದಿದ್ದಾರೆ.
ದೇವಸ್ಥಾನದ ದೀಪಾಲಂಕೃತ ರಾಜಗೋಪುರದ ಮುಂದೆ ಫೋಟೋ ತೆಗೆಸಿಕೊಂಡಿರುವ ನಟಿ, ಆ ಚಿತ್ರಗಳನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ತಿಳಿ ಗುಲಾಬಿ ಬಣ್ಣದ ಸಲ್ವಾರ್ ಧರಿಸಿ ಸರಳವಾಗಿ ಕಾಣಿಸಿಕೊಂಡಿರುವ ತ್ರಿಷಾ, ಫೋಟೋಗಳಿಗೆ ‘ಡಿವೈನ್’ (Divine) ಎಂಬ ಶೀರ್ಷಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರ ಸಂಗೀತದೊಂದಿಗೆ ಫೋಟೋಗಳನ್ನು ಇನ್ಸ್ಟಾಗ್ರಾಂ ಸ್ಟೋರಿಯಲ್ಲೂ ಹಂಚಿಕೊಂಡಿದ್ದಾರೆ.
ನಟಿ ತ್ರಿಷಾ ಅವರ ಶೃಂಗೇರಿ ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿವೆ. ಅವರ ಸರಳ ಉಡುಗೆ ಹಾಗೂ ಸುಂದರ ನೋಟಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.









