ಚಿಕ್ಕನರಗುಂದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿದ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮಣ ಕಂಬಳಿ

0
Spread the love

ವಿಜಯಸಾಕ್ಷಿ ಸುದ್ದಿ, ನರಗುಂದ

Advertisement

ಚಿಕ್ಕನರಗುಂದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದ ವಿಧ್ಯಾರ್ಥಿಗಳು ಡೊಳ್ಳು ಮೇಳಗಳೊಂದಿಗೆ ಗ್ರಾಮ ಪಂಚಾಯತಿ ಹಾಗೂ ಎಸ್ ಡಿ ಎಮ್ ಸಿ.ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರನ್ನು ಆತ್ಮೀಯವಾಗಿ ವೇದಿಕೆಗೆ ಸ್ವಾಗತಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಗದಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ನರಗುಂದ, ಸಮೂಹ ಸಂಪನ್ಮೂಲ‌ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಚಿಕ್ಕನರಗುಂದ ಇವರುಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿವಸಗಳ ಕಾಲ ನೆಡೆಯುತ್ತಿರುವ 2023 ರ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದ ಕಾರ್ಯಕ್ರಮವನ್ನು ಗ್ರಾ.ಪಂ.ಅಧ್ಯಕ್ಷರಾದ ಲಕ್ಷ್ಮಣ ಕಂಬಳಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಮಕ್ಕಳಿಗೆ ಕಲಿಕಾ ಆಸಕ್ತಿಯನ್ನು ಹೆಚ್ಚಿಸುವುದು, ಹಲವಾರು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುವದಕ್ಕೆ ಕಲಿಕಾ ಹಬ್ಬ ಪೂರಕವಾಗಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಮ್ ಸಿ.ಅಧ್ಯಕ್ಷ ಶರಣಬಸಪ್ಪ ಹಳೇಮನಿ ಅವರು, ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದ ಕಾರ್ಯಕ್ರಮದಲ್ಲಿ ಬರುವ ವಿಷಯಗಳನ್ನು ಚೆನ್ನಾಗಿ ಅರಿತುಕೊಂಡು ಕಾರ್ಯಗತಗೊಳಿಸಲು ವಿಧ್ಯಾರ್ಥಿಗಳಿಗೆ ಕರೆ ನೀಡಿದರು.

ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿಯೂ ಸಹ ಕಲಿಕಾ ಹಬ್ಬವನ್ನು ಆಚರಿಸುತ್ತಿದ್ದಾರೆ. ಇದರಿಂದ ಮಕ್ಕಳಲ್ಲಿ ಶಿಕ್ಷಣ, ವೈಜ್ಞಾನಿಕ ಮತ್ತು ವಿಮಾರ್ಶಾತ್ಮಕ ಚಿಂತನೆಯನ್ನು ಪ್ರಸಾರಗೊಳಿಸುವುದು ಹಾಗೂ ವಿಧ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದು ಈ ಕಲಿಕಾ ಹಬ್ಬದ ಗುರಿಯಾಗಿದೆ ಎಂದು ಕಾಲೇಜು ಪ್ರಾಚಾರ್ಯರಾದ ಶ್ರೀಕಾಂತ ದಂಡನಾಯ್ಕರ್ ತಿಳಿಸಿದರು.

ಶಿಕ್ಷಕರಾದ ಪಿ.ಸಿ.ಕಲಹಾಳ ಮಾತನಾಡಿ, ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರತಿಬಿಂಬಿಸಲು ಈ ಕಲಿಕಾ ಹಬ್ಬದ ಮೂಲಕ ಉತ್ಸಾಹ ಬೆಳಿಸಿಕೊಂಡು ವಿಧ್ಯಾಭ್ಯಾಸದಲ್ಲಿ ಜಾಣರಾಗಿ ಮುಂದುವರೆಯಬೇಕೆಂದರು.

ಈ ಸಂದರ್ಭದಲ್ಲಿ ಗ್ರಾ.ಪಂ.ಪಂಚಾಯತಿ ಮಾಜಿ ಅಧ್ಯಕ್ಷರಾದ ಮುತ್ತು ರಾಯರಡ್ಡಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶೈನಾಜ್ ಮುಜಾವರ್, ಗ್ರಾ.ಪಂ.ಸದಸ್ಯರಾದ ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಈರಮ್ಮ ಮುದಿಗೌಡ್ರ, ಶೋಭಾ ಕೋಣನ್ನವರ, ಮುಖ್ಯೋಪಾಧ್ಯಾಯರಾದ ವಿದ್ಯಾಸಾಗರ್ ಬೋಗಾರ್, ಸುರೇಶ ಭಜಂತ್ರಿ, ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಸಂಪನ್ಮೂಲ ಶಿಕ್ಷಕರು ಬೆನಕನಕೊಪ್ಪ, ಸಂಕಧಾಳ ಗ್ರಾಮದ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು. ಗ್ರಾಮದ ನಾಗರಿಕರು ಹಾಜರಿದ್ದು ಕಾರ್ಯಕ್ರಮ ನೋಡಿ ಆನಂದಿಸಿದರು.

ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ರೋಹಿಣಿ ಕುರ್ತಕೋಟಿ ಸ್ವಾಗತಿಸಿದರು. ಅನ್ನಪೂರ್ಣ ತೇಲಿ‌ ಕಾರ್ಯಕ್ರಮದ ನಿರೂಪಣೆ ಮಾಡಿದರು. ಜೆ.ಬಿ.ಆರೈರ ವಂದನಾರ್ಪಣೆ ಮಾಡಿದರು.


Spread the love

LEAVE A REPLY

Please enter your comment!
Please enter your name here