ಪ್ರಜಾಪ್ರಭುತ್ವ ಸರ್ಕಾರನ್ನು ಬಲಿಷ್ಠಪಡಿಸಲು ಎಲ್ಲರೂ ಕೈಜೋಡಿಸಿ…….

0
Spread the love

74ನೇ ಗಣರಾಜ್ಯೋತ್ಸವ ದಿನಾಚರಣೆ – ಶಿಕ್ಷಣ ಇಲಾಖೆಯ ವೈಫಲ್ಯಕ್ಕೆ ಬೇಸರ……

Advertisement

ವಿಜಯಸಾಕ್ಷಿ ಸುದ್ದಿ, ನವಲಗುಂದ: ಹಲವಾರು ಭಾಷೆ, ಉಡುಗೆ- ತೊಡುಗೆ, ಆಚಾರ- ವಿಚಾರಗಳನ್ನು ಹೊಂದಿರುವ ಭಾರತ ದೇಶವು ವೈವಿದ್ಯತೆಯಲ್ಲಿ ಏಕತೆಯನ್ನು ಸಾಧಿಸುವ ಮೂಲಕ ಬೃಹತ್ತಾದ ಗಣರಾಜ್ಯವನ್ನು ಹೊಂದಿದೆ. ಜನರಿಂದ ಜನರಿಗೋಸ್ಕರ ಜನರಿಗಾಗಿ ನಡೆಸಕ್ಕಂತ ಸರ್ಕಾರನ್ನು ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳುತ್ತೇವೆ. ಅಂತಹ ಪ್ರಜಾಪ್ರಭುತ್ವ ಸರ್ಕಾರವನ್ನು ಬಲಿಷ್ಠ ಪಡಿಸಲು ಎಲ್ಲರೂ ಸಹಕರಿಸಿ ಭಾರತದ ಉತ್ತಮ ಪ್ರಜೆಗಳಾಗಿ ಏಕತೆ ಅಭಿವೃದ್ಧಿ ಕಡೆ ಕೈಜೋಡಿಸಿ ನವಭಾರತದ ನಿರ್ಮಾಣ ಮಾಡಬೇಕೆಂದು ತಹಸೀಲ್ದಾರ್ ಅನಿಲ ಬಡಿಗೇರ ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಗುರುವಾರ ಇಲ್ಲಿಯ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ 74ನೇ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ನೂರಾರು ವರ್ಷಗಳ ನಿರಂತರ ಶೋಷಣೆಗೆ ಒಳಗಾಗಿ ನಲುಗಿ ಹೋಗಿದ್ದ ದೇಶದ ಸ್ವಾತಂತ್ರ್ಯವನ್ನು ಪಡೆಯಲು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಸ್ಮರಿಸುವಂತಹ ದಿನವಿದು. ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿನಲ್ಲಿಯೇ ಬೃಹತ್ತಾದ ಸಂವಿಧಾನವನ್ನು ರಚನೆ ಮಾಡಿ ಅದನ್ನು ಅಂಗೀಕಾರ ಮಾಡಿ ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ ದಿನವಿದು.

ಎಲ್ಲಿಯ ತನಕ ತಾವು ಸಾಮಾಜಿಕ ಸ್ವಾತಂತ್ರ್ಯವನ್ನು ಸಾಧಿಸುವುದಿಲ್ಲವೋ ಅಲ್ಲಿಯ ತನಕ ಕಾನೂನು ಒದಗಿಸುವ ಯಾವುದೇ ಸ್ವಾತಂತ್ರ್ಯವನ್ನು ಪಡೆದರೂ ಅದು ಪ್ರಯೋಜನಾಗುವುದಿಲ್ಲವೆಂದು ಡಾ.ಬಿ.ಆರ್.ಅಂಬೇಡ್ಕರ ಹೇಳಿರುವ ಮಾತನ್ನು ನೆನಪಿನಲ್ಲಿಟ್ಟುಕೊಂಡು ಸ್ವಾತಂತ್ರ್ಯ, ಸಹೋದರತೆ, ಸಮಾನತೆ ಪಾಲನೆ ಮಾಡಿದಾಗ ಸಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ.

ಕೃಷಿ ಉತ್ಪಾದನೆಯನ್ನು ಹೆಚ್ಚಿಸಿ ಹೊರ ರಾಷ್ಟ್ರಗಳಿಗೆ ರಪ್ತು ಮಾಡುತ್ತಿರುವ ಈ ದೇಶ ಕೈಗಾರಿಕೆಗಳಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಶ್ರೇಷ್ಟತೆಯನ್ನು ಮೆರೆದಿದೆ. ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿರುವ ಈ ದೇಶದ ಏಕತೆಗೆ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ಪದಕ ವಿಜೇತ ಸಿಪಿಐ ದೃವರಾಜ ಪಾಟೀಲ, ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಸಾವಿತ್ರಮ್ಮ ಪೂಜಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ದಳಗಳ ಪರಿವೀಕ್ಷಣೆ ಮಾಡಲಾಯಿತು. ನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪುರಸಭೆ ಅಧ್ಯಕ್ಷ ಮೋದಿನಸಾಬ ಶಿರೂರ, ಉಪಾಧ್ಯಕ್ಷೆ ಪದ್ಮಾವತಿ ಪೂಜಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ.ಮಲ್ಲಾಡ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭಾಗ್ಯಶ್ರೀ ಜಹಗೀರದಾರ, ಮುಖ್ಯಾಧಿಕಾರಿ ವಿರೇಶ ಹಸಬಿ. ಪಿಎಸ್‍ಐ ನವೀನ ಜಕ್ಕಲಿ, ಅಬಕಾರಿ ಇನ್ಸಪೆಕ್ಟರ್ ಗೀತಾ ತೆಗ್ಯಾಳ, ಪುರಸಭೆ ಸದಸ್ಯರು, ಚುನಾಯಿತ ಪ್ರತಿನಿಧಿಗಳು. ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿಕ್ಷಣ ಇಲಾಖೆಯ ವೈಪಲ್ಯತೆ ಖೇದಕರ :
ಗಣರಾಜ್ಯೋತ್ಸವವನ್ನು ಶಿಸ್ತಿನಿಂದ ಆಚರಿಸಬೇಕೆಂದು ಶಿಕ್ಷಣ ಇಲಾಖೆಯ ಸಭೆ ಮಾಡಿ ಸೂಚನೆ ನೀಡಿದ್ದರು. ಸರಿಯಾದ ವ್ಯವಸ್ಥೆಯನ್ನು ಮಾಡದೇ ತಮ್ಮ ತಮ್ಮ ಶಾಲೆಯ ಮಕ್ಕಳನ್ನು ನಿಯಂತ್ರಿಸುವಲ್ಲಿ ವಿಫಲರಾಗಿ ಶಾಂತತೆಗೆ ಭಗ್ನ ಉಂಟಾಗಿರುವುದು ಖೇದಕರ ಸಂಗತಿ ಎಂದು  ತಹಸೀಲ್ದಾರ್ ಅನಿಲ ಬಡಿಗೇರ ಬೇಸರ ವ್ಯಕಪಡಿಸಿದರು. 


Spread the love

LEAVE A REPLY

Please enter your comment!
Please enter your name here