HomeASSEMBLE ELECTIONನಾಮಪತ್ರ ಹಿಂಪಡೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಕೆಆರ್‌ಎಸ್ ಅಭ್ಯರ್ಥಿ

ನಾಮಪತ್ರ ಹಿಂಪಡೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಕೆಆರ್‌ಎಸ್ ಅಭ್ಯರ್ಥಿ

For Dai;y Updates Join Our whatsapp Group

ಕೆಆರ್ ಎಸ್ ಅಭ್ಯರ್ಥಿ ಮಂಜುನಾಥ ಗುರಿಕಾರ…..

ವಿಜಯಸಾಕ್ಷಿ ಸುದ್ದಿ, ರೋಣ

ರೋಣ ವಿಧಾನಸಭಾ ಮತಕ್ಷೇತ್ರಕ್ಕೆ ಕೆಆರ್‌ಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ಮಂಜುನಾಥ ಗುರಿಕಾರ ತಮ್ಮ ನಾಮಪತ್ರವನ್ನು ಹಿಂಪಡೆದು, ತಮ್ಮ ಬೆಂಬಲಿಗರೊಂದಿಗೆ ಸೋಮವಾರ ಸಂಜೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಜಿ.ಎಸ್. ಪಾಟೀಲ, ಮಂಜುನಾಥ ಗುರಿಕಾರರವರು ತಮ್ಮ ನಾಮಪತ್ರವನ್ನು ಹಿಂಪಡೆಯುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದು ಸ್ಮರಣೀಯವಾಗಿದೆ.

ಗುರಿಕಾರವರ ಶಕ್ತಿಯನ್ನು ಕಾಂಗ್ರೆಸ್ ಪಕ್ಷ ಸದ್ಬಳಕೆ ಮಾಡಿಕೊಳ್ಳುತ್ತದೆ. ಅವರ ಅಭಿಮಾನಿಗಳೂ ಈಗಿನಿಂದಲೇ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದರು.

ಐ.ಎಸ್. ಪಾಟೀಲ, ಸಂಗನಗೌಡ ಪಾಟೀಲ, ಬಸವರಾಜ ನವಲಗುಂದ, ಪರಶುರಾಮ ಅಳಗವಾಡಿ, ಯೂಸುಪ್ ಇಟಗಿ, ಆನಂದ ಚಂಗಳಿ, ಪ್ರಭು ಮೇಟಿ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img