ನೀತಿ ಸಂಹಿತೆ ಉಲ್ಲಂಘನೆ: ಜಿಮ್ಸ್‌ ಸಿಬ್ಬಂದಿ ವಿರುದ್ಧ ಪ್ರಕರಣ

0
Spread the love

ಬಿಜೆಪಿ ಶಕ್ತಿ ತೋರಿಸುತ್ತೇವೆ…….

Advertisement

ವಿಜಯಸಾಕ್ಷಿ ಸುದ್ದಿ, ಗದಗ

ಚುನಾವಣೆಯ ನಿಮಿತ್ತ ಹೊರಡಿಸಿರುವ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಗದಗ ಜಿಮ್ಸ್‌ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಿಂದಿಯೋರ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಜಿಮ್ಸ್‌ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಗದುಗಿನ ಪಂಚಾಕ್ಷರಿ ವೀರಶಟ್ಟರ ವಿರುದ್ಧ ದೂರು ದಾಖಲಿಸಲಾಗಿದೆ.

ಮಾರ್ಚ್.30ರಂದು ವಾಟ್ಸಪ್‌ನಲ್ಲಿ ಬಿಜೆಪಿ ಪಕ್ಷದ ಪರವಾಗಿ 600 ತಾಸಿನಲ್ಲಿ ತೋರಿಸುತ್ತೇವೆ ಬಿಜೆಪಿ ಶಕ್ತಿಯನ್ನು ಎಂಬ ಸಂದೇಶವನ್ನು ಅವರು ರವಾನಿಸಿದ್ದರು.

ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಿಮಿತ್ತ ಹೊರಡಿಸಿರುವ ಮಾದರಿ ನೀತಿ ಸಂಹಿತೆಯನ್ನು ಪಾಲಿಸದೇ, ನಿಯಮಗಳನ್ನು ಉಲ್ಲಂಘಿಸಿ ತಮ್ಮ ಮೊಬೈಲ್‌ನಿಂದ ವಾಟ್ಸಪ್‌ನಲ್ಲಿ ಸಂದೇಶ ಕಳಿಸಿ, ತಮ್ಮ ಕರ್ತವ್ಯವನ್ನು ಹೊರತುಪಡಿಸಿ ಚುನಾವಣಾ ಪ್ರಚಾರ ಕೈಗೊಂಡಿದ್ದರು.

0098/2023 ಕಲಂ-171-(ಸಿ),(ಎಫ್)ಐಪಿಸಿ ಹಾಗೂ 123(2) ಆರ್.ಪಿ ಕಾಯ್ದೆಯ ಕಲಂಗಳಡಿ ಅಗತ್ಯ ಕ್ರಮ ಜರುಗಿಸುವಂತೆ ಚುನಾವಣಾ ಕರ್ತವ್ಯನಿರತ ಅಧಿಕಾರಿ ಮಂಜುನಾಥ ಪರಶುರಾಮ ಗುಳೇದ ದೂರು ನೀಡಿದ್ದರು.

ತತ್ಸಂಬಂಧ ಗದಗ ಗ್ರಾಮೀಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here