ಕರ್ತವ್ಯ ಲೋಪ, ಬೇಜವಬ್ದಾರಿ ಆರೋಪದ ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿದ್ದ ಕಂದಾಯ ಅಧಿಕಾರಿ….
ವಿಜಯಸಾಕ್ಷಿ ಸುದ್ದಿ, ಗದಗ
ಸಸ್ಪೆಂಡ್ ಆಗಿ ಹದಿನೈದು ದಿನಗಳಲ್ಲಿ ಸರಕಾರ ಬಡ್ತಿ ಗಿಫ್ಟ್ ನೀಡಿದ ಅಪರೂಪದ ಘಟನೆ ನಡೆದಿದೆ.
ಗದಗ ನಗರಸಭೆಯಲ್ಲಿ ಕಂದಾಯ ಅಧಿಕಾರಿಯಾಗಿದ್ದ ಮಹೇಶ್ ಹಡಪದ ಸಸ್ಪೆಂಡ್ ಆಗಿ ಹದಿನೈದು ದಿನಗಳಲ್ಲಿಯೇ ಮುಖ್ಯಾಧಿಕಾರಿ ಹುದ್ದೆಗೆ ಬಡ್ತಿ ಹೊಂದಿದ ಅಧಿಕಾರಿಯಾಗಿದ್ದಾರೆ.
ಗದಗ ನಗರಸಭೆಯಲ್ಲಿ ಕಂದಾಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಹಡಪದ ಅವರನ್ನು ಕರ್ತವ್ಯ ಲೋಪ ಹಾಗೂ ಬೇಜವಬ್ದಾರಿತನ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜುಲೈ 25 ರಂದು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.
ಇದನ್ನೂ ಓದಿ ಫಾರ್ಮ್ ನಂ.3 ವಿತರಣೆಯಲ್ಲಿ ಕರ್ತವ್ಯಲೋಪ; ನಗರಸಭೆ ಕಂದಾಯ ಅಧಿಕಾರಿ ಸಸ್ಪೆಂಡ್ ಮಾಡಿ ಡಿಸಿ ಆದೇಶ
ಸಾರ್ವಜನಿಕರಿಗೆ ಫಾರ್ಮ್ ನಂ.3 ವಿತರಣೆಯಲ್ಲಿ ವಿಳಂಬ ಹಾಗೂ ನಿವೇಶನಗಳಿಗೆ ನಿರಪೇಕ್ಷಣಾ ಪತ್ರ ಪಡೆಯದೇ ಫಾರ್ಮ್ ನಂ.3 ವಿತರಣೆ ಮಾಡಿದ ಆರೋಪ ಮಹೇಶ್ ಹಡಪದ ಅವರ ಮೇಲಿತ್ತು.

ನಿಯಮ ಬಾಹಿರವಾಗಿ 1063 ನಿವೇಶನಗಳಿಗೆ ಫಾರ್ಮ್ ನಂ.3 ವಿತರಿಸಿ ಕರ್ತವ್ಯ ಲೋಪವೆಸಗಿದ್ದರು. ನಗರಸಭೆ ಸದಸ್ಯರಾದ ಬರಕತ್ ಅಲಿ ಮುಲ್ಲಾ ಹಾಗೂ ಲಕ್ಷ್ಮಿ ಅನಿಲಕುಮಾರ್ ಸಿದ್ಷಮ್ಮನಹಳ್ಳಿ ದೂರು ನೀಡಿದ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಅವರು ತನಿಖೆ ಮಾಡಿ ಡಿಸಿ ಅವರಿಗೆ ವರದಿ ಸಲ್ಲಿಸಿದ್ದರು.

ಅಪರ ಜಿಲ್ಲಾಧಿಕಾರಿಗಳ ವರದಿ ಆಧರಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಸಸ್ಪೆಂಡ್ ಆಗಿದ್ದ ಹದಿನೈದು ದಿನಗಳಲ್ಲಿ ಸರಕಾರ ಇದೀಗ
ಬಾಗಲಕೋಟೆ ಜಿಲ್ಲೆಯ ಕೆರೂರ ಪಟ್ಟಣ ಪಂಚಾಯತಿಗೆ ಮಹೇಶ್ ಹಡಪದ ಅವರನ್ನು ಮುಖ್ಯಾಧಿಕಾರಿಯಾಗಿ ಬಡ್ತಿ ನೀಡಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.