ಜೂನ್ ೩೦ ರ ವರೆಗೆ ಮೈಲಾರಲಿಂಗೇಶ್ವರ ದೇವಸ್ಥಾನ ಪ್ರವೇಶ ಇಲ್ಲ

Vijayasakshi (Gadag News) :

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,
ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸುಪ್ರಸಿದ್ಧ ಮೈಲಾರಲಿಂಗೇಶ್ವರ ದೇವಾಲಯವನ್ನು ಜೂನ್ ೩೦ ರ ವರೆಗೂ ದರ್ಶನಕ್ಕೆ ಮುಕ್ತಗೊಳಿಸದಂತೆ ದೇವಾಲಯದ ಭಕ್ತರು ಧರ್ಮದರ್ಶಿಗಳಿಗೆ ಹಾಗೂ ತಾಲೂಕು ದಂಡಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಭಕ್ತರ ಮನವಿಗೆ ಸ್ಪಂದಿಸಿದ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್, ದೇವಸ್ಥಾನವನ್ನು ಜೂನ್ ೩೦ ರ ನಂತರವಷ್ಟೇ ಭಕ್ತರ ದರ್ಶನಕ್ಕೆ ಮುಕ್ತಗೊಳಿಸಲು ಒಪ್ಪಿದ್ದಾರೆ. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ದೇವಾಲಯ ತೆರೆಯಲು ಅನುಮತಿ ಇದೆ, ಆದರೆ ರಾಜ್ಯದಲ್ಲಿ ಕೊರೋನಾ ಅಬ್ಬರ ಇನ್ನೂ ಕಡಿಮೆಯಾಗಿಲ್ಲ ಈ ನಿಟ್ಟಿನಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದೇವಸ್ಥಾನ ಮಂಡಳಿ ಈ ನಿರ್ಣಯ ಕೈಕೊಂಡಿದೆ.

ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTube ಅನುಸರಿಸಿ.
Leave A Reply

Your email address will not be published.

twenty + sixteen =