ವೆಸ್ಟ್ಎಂಡ್ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ – ಸಿಎಂ

0
Spread the love

ಬೆಂಗಳೂರು;- ವೆಸ್ಟ್​ಎಂಡ್ ಹೋಟೆಲ್​ನಲ್ಲಿ ಕೂತು ನಡೆಸುತ್ತಿಲ್ಲ ಸರ್ಕಾರ ನಡೆಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಮಿಷನ್​ಗಾಗಿ ಕೃತಕ ವಿದ್ಯುತ್ ಕೊರತೆ ಸೃಷ್ಟಿಸಲಾಗುತ್ತಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು,ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದಾಗಿ ಜಲವಿದ್ಯುತ್ ಉತ್ಪಾದಕ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ಸಮನಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲದಂತಾಗಿದೆ. ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ನಾವು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.

ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನವೀಕರಿಸಬಹುದಾದ ಇಂಧನ ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಕಡೆಗೂ ಗಮನ ಹರಿಸಿದ್ದೇವೆ. ನಾವು ವೆಸ್ಟ್​ಎಂಡ್ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಸಿಎಂ ತಿರುಗೇಟು ನೀಡಿದರು.

ವಿದ್ಯುತ್ ಕೊರತೆ ನೀಗಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಎಕ್ಸ್ ಮೂಲಕ ಪೋಸ್ಟ್ ಮಾಡಿದ್ದಾರೆ. ರೈತರಿಗೆ ಮೂರು ಪಾಳಿಯಲ್ಲಿ ನಿರಂತರ 5 ಗಂಟೆಗಳ ವಿದ್ಯುತ್‌ ಪೂರೈಕೆಗೆ ಸೂಚನೆ ನೀಡಲಾಗಿದೆ. ಉತ್ತರ ಪ್ರದೇಶದಿಂದ 300 ಮೆ.ವ್ಯಾ. ಮತ್ತು ಪಂಜಾಬ್‌ನಿಂದ 600 ಮೆ.ವ್ಯಾ. ವಿದ್ಯುತ್ ಖರೀದಿಗೆ ಸೂಚನೆ ನೀಡಲಾಗಿದೆ. ವಿದ್ಯುತ್ ಕಾಯ್ದೆಯ ಸೆಕ್ಷನ್ 11 ಜಾರಿ, ರಾಜ್ಯದ ಎಲ್ಲಾ ವಿದ್ಯುತ್‌ ಉತ್ಪಾದನಾ ಘಟಕಗಳು ಗರಿಷ್ಠ ವಿದ್ಯುತ್‌ ಉತ್ಪಾದಿಸಿ ರಾಜ್ಯದ ಗ್ರಿಡ್​​ಗೆ ಪೂರೈಸುವಂತೆ ಆದೇಶಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯದ ಶಾಖೋತ್ಪನ್ನ ವಿದ್ಯುತ್ ಘಟಕಗಳಿಗೆ ಮರುಚಾಲನೆ ನೀಡಲಾಗಿದೆ. ಈ ಎಲ್ಲ ಕಲ್ಲಿದ್ದಲು ಸಂಸ್ಥೆಗಳಿಂದ 15 ಲಕ್ಷ ಮೆಟ್ರಿಕ್ ಟನ್ ಪಡೆಯಲು ಕ್ರಮ ಕೈಗೊಳ್ಳಲಾಗುವುದು. ಅಲ್ಪಾವಧಿ ಆಧಾರದಲ್ಲಿ 1300 ಮೆ.ವ್ಯಾ. ವಿದ್ಯುತ್ ಖರೀದಿಗೆ ಕ್ರಮ ವಹಿಸಲಾಗುತ್ತಿದೆ. ಕೆಪಿಸಿಎಲ್​ನ ಅನಿಲ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಾರ್ಯಾಚರಣೆ ಆರಂಭಕ್ಕೆ ಕ್ರಮ ವಹಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ


Spread the love

LEAVE A REPLY

Please enter your comment!
Please enter your name here