ದಾವಣಗೆರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತಾದ ಸುದ್ದಿಗಳ ಬಗ್ಗೆ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು, “ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡೋಣ. ಒಟ್ಟಾರೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು” ಎಂದು ತಿಳಿಸಿದರು.
“ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ. ಮೊನ್ನೆ ಚುನಾವಣೆ ವೇಳೆ ಹೊಸ ಮುಖಗಳಿಗೆ ಟಿಕೆಟ್ ನೀಡಲಾಯಿತು. ಹಳಬರ ಕಾಲು ಏನಾದರೂ ಬಿದ್ದು ಹೋಗಿದ್ದವಾ? ಚುನಾವಣೆ ವೇಳೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಆಗಬೇಕಿತ್ತು. ಆದರೆ, ಅದು ಆಗಲಿಲ್ಲ” ಎಂದರು.
ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ರಾಜ್ಯಕ್ಕೆ ಅವರಂತಹ ಜಾತ್ಯತೀತ ಹಾಗೂ ಸಮರ್ಥ ನಾಯಕ ಬೇಕು. ವಿಜಯದಶಮಿ ದಿನ ಒಂದು ಮಾತು ಹೇಳುತ್ತಿದ್ದೇನೆ; ರಾಜ್ಯದಲ್ಲಿ ಬಿಎಸ್ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಸೂಕ್ತ. ಬಿಎಸ್ವೈ ಹೊರಟರೆ ಲಕ್ಷಾಂತರ ಕಾರ್ಯಕರ್ತರು ಹಿಂದೆ ನಿಲ್ಲುತ್ತಾರೆ” ಎಂದರು.