ಹುಲಿ ಉಗುರು ವಿವಾದ: ಸ್ಪಷ್ಟನೆ ಕೊಟ್ಟ ನಿಖಿಲ್ ಕುಮಾರಸ್ವಾಮಿ

0
Spread the love

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರ ಹೆಸರೂ ಕೇಳಿಬಂದಿದೆ. ನಿಖಿಲ್ ಕುಮಾರಸ್ವಾಮಿಯವರು ತಮ್ಮ ಮದುವೆಯ ಸಂದರ್ಭದಲ್ಲಿ ಹುಲಿಯುಗುರನ್ನು ಧರಿಸಿದ್ದಾರೆಂದು ಆರೋಪಿಸಲಾಗಿದೆ. ನಿಖಿಲ್ ಅವರು ತಮ್ಮ ವಿವಾಹದ ಸಂದರ್ಭದಲ್ಲಿ ಹುಲಿಯುಗುರನ್ನು ಧರಿಸಿದ್ದರು ಎಂಬುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ವಿಷಯ ತಿಳಿಯುತ್ತಲೇ ನಿಖಿಲ್ ಅವರು ತಮ್ಮ ಟ್ವಿಟರ್ ಖಾತೆಯ ಮೂಲಕ ಇದಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ. “ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ.

Advertisement

ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ” ಎಂದು ಅವರು ತಿಳಿಸಿದ್ದಾರೆ. ಜೊತೆಗೆ, “ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ.’’ ಎಂದು ಅವರು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here