ಯಾದಗಿರಿ: ಯಾದಗಿರಿಯಲ್ಲಿ ಕೆಇಎ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 16 ಮಂದಿಯನ್ನು ಬಂಧಿಸಲಾಗಿತ್ತು, ಈ ಪೈಕಿ 9 ಮಂದಿಯನ್ನು ಸಿಜೆಎಂ ನ್ಯಾಯಾಧೀಶರ ಅನುಮತಿ ಮೇರೆಗೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
Advertisement
ಆರೋಪಿಗಳು ಕೆಇಎ ಪರೀಕ್ಷೆಯಲ್ಲಿ ಬ್ಲೂ ಟೂತ್ ಬಳಸಿ ಪರೀಕ್ಷೆ ಬರೆದಿದ್ದರು. ಕೆಇಎಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ಮಾಡಿದ ಆರೋಪದ ಮೇಲೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಟ್ಟು 16 ಜನರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ವಶದಲ್ಲಿದ್ದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.