HomeDharwadಗುಡಗೇರಿ ಠಾಣೆಯ ಎಎಸ್‌ಐ ಬಸವರಾಜ ವಿಷ ಸೇವಿಸಿ ಆತ್ಮಹತ್ಯೆ

ಗುಡಗೇರಿ ಠಾಣೆಯ ಎಎಸ್‌ಐ ಬಸವರಾಜ ವಿಷ ಸೇವಿಸಿ ಆತ್ಮಹತ್ಯೆ

For Dai;y Updates Join Our whatsapp Group

Spread the love

ಹುಬ್ಬಳ್ಳಿ : ಸಮೀಪದ ಕುಂದಗೋಳ ತಾಲ್ಲೂಕಿನ ಗುಡಿಗೇರಿಯ ಪೊಲೀಸ್‌ ಠಾಣೆಯ ಎಎಸ್‌ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಅವರು ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ಧಾರೆ.

‘ಸೋಮವಾರ ರಾತ್ರಿ ಪಾಳಿ ಕಾರ್ಯನಿರ್ವಹಿಸಿ ಹೋಗಿದ್ದ ಅವರು ವಸತಿ ಗೃಹದ ಆವರಣದ ಬಳಿ ದೇಗುಲ ಭಾಗದಲ್ಲಿ ಮಲಗಿದ್ಧಾರೆ. ಮಂಗಳವಾರ ಮಧ್ಯಾಹ್ನ ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ನಂತರ ಮಂಗಳವಾರ ತಡರಾತ್ರಿವರೆಗೂ ಅವರನ್ನು ಲಕ್ಷ್ಮೇಶ್ವರ ಆಸ್ಪತ್ರೆ ಒಯ್ಯಲಾಯಿತು ಅವರು ಮೃತಪಟ್ಟಿದ್ದರು’ ಎಂದು ಪೊಲೀಸರು ತಿಳಿಸಿದ್ಧಾರೆ.

‘ಎಎಸ್‌ಐ ಬಸವರಾಜ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಅವರು ಕೆಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು ಎಂದು ಅವರ ಜತೆಗಿದ್ದವರಿಂದ ತಿಳಿದು ಬಂದಿದೆ .

ಬಸವರಾಜ ಅವರು ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಶಾಂತಗಿರಿ ಗ್ರಾಮದವರು. ಅವರಿಗೆ ಪತ್ನಿ, ಮೂವರು ಮಕ್ಕಳು ಇದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!