ಶಿವಮೊಗ್ಗದಿಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಎತ್ತಂಗಡಿ

0
Spread the love

ಬೆಂಗಳೂರು;- ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಅವರು ಶಿವಮೊಗ್ಗದಿಂದ ವರ್ಗಾವಣೆ ಮಾಡಲಾಗಿದೆ. ಕೋಲಾರಕ್ಕೆ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೆರಿಯಲ್ಲಿ ಲೆಕ್ಕಾಧೀಕ್ಷಕರಾಗಿದ್ದ ಷಡಾಕ್ಷರಿ ಅವರನ್ನು ಕೋಲಾರ ಜಿಲ್ಲೆಯಲ್ಲಿ ಖಾಲಿಯಿದ್ದ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆಗೊಳಿಸಿ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

Advertisement

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರು ಶಿವಮೊಗ್ಗದಲ್ಲಿ ಕರ್ತವ್ಯ ಸ್ಥಾನದಲ್ಲಿರದೇ ಹೆಚ್ಚಾಗಿ ಬೆಂಗಳೂರಿನಲ್ಲಿಯೇ ಇರುತ್ತಾರೆನ್ನುವ ಆರೋಪ ಕೇಳಿಬಂದಿತ್ತು. ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಹೆಚ್ಚಿನ ಕೆಲಸ ಇಲ್ಲದ್ದರಿಂದ ಶಿವಮೊಗ್ಗದ ಬದಲಿ ಬೆಂಗಳೂರಿನಲ್ಲಿಯೇ ಅವರು ಹೆಚ್ಚಿನ ಸಮಯ ಕಳೆಯುತ್ತಿದ್ದರೆಂದು ಹೇಳಲಾಗಿತ್ತು.

ಶಿವಮೊಗ್ಗದ ಲೆಕ್ಕಪರಿಶೋಧನೆ ಇಲಾಖೆಯಲ್ಲಿ ಲೆಕ್ಕಾಧೀಕ್ಷಕರಾಗಿದ್ದ ಷಡಕ್ಷರಿ ಕಚೇರಿಗೆ ಬರದೇ ಇರುವುದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಶಿವಮೊಗ್ಗದಿಂದ ಕೋಲಾರ ಜಿಲ್ಲೆಗೆ ವರ್ಗಾವಣೆ ಮಾಡಿದೆ. ಅಷ್ಟೇ ಅಲ್ಲ, ಹೆಚ್ಚಿನ ಕೆಲಸದ ಒತ್ತಡವಿರುವ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರನ್ನಾಗಿ ನೇಮಕ ಮಾಡಿದೆ. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪನವರ ಜೊತೆ ಷಡಾಕ್ಷರಿ ನಿಕಟ ಸಂಪರ್ಕದಲ್ಲಿದ್ದರು ಎನ್ನುವ ಆರೋಪವೂ ಕೇಳಿ ಬಂದಿತ್ತು. ಕಳೆದ ವಿಧಾನಭೆ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್​ಗೂ ಸಹ ಪ್ರಯತ್ನ ನಡೆಸಿದ್ದರೂ ಎಂದು ಹೇಳಲಾಗಿತ್ತು.


Spread the love

LEAVE A REPLY

Please enter your comment!
Please enter your name here