ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕು ಗುಳುವಿನ ಅತ್ತಿಗುಪ್ಪೆ ಗ್ರಾಮದಲ್ಲಿ ರೈತ ಮಂಜೇಗೌಡ ಅವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಬಿದ್ದಿದೆ. ಕಳೆದ ಒಂದು ತಿಂಗಳಿಂದ ಈ ಭಾಗದಲ್ಲಿ ಚಿರತೆ ಹಾವಳಿ ವಿಪರೀತವಾಗಿತ್ತು. ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಗೆಯ ಬಾಯಿಗೆ ಈಗಾಗಲೇ ಕರು ನಾಯಿ ಮೇಕೆಗಳು ಆಹಾರವಾಗಿವೆ.
Advertisement
ಬಟಿಗನಹಳ್ಳಿ ಮುಂಜನಹಳ್ಳಿ ಸೋಮನಹಳ್ಳಿ ಸಂಬ್ರವಳ್ಳಿ ಹೊಸ ಅಗ್ರಹಾರ ಸೇರಿ ಹಲವು ಕಡೆ ದಾಳಿ ಮಾಡಿತ್ತು. ಇದರ ಚಲನವಲನ ಅಧ್ಯಯನ ಮಾಡಿದ ಅರಣ್ಯಾಧಿಕಾರಿಗಳು, ಮೂರು ದಿನದ ಹಿಂದೆ ಚಿರತೆ ಕಾಣಿಸಿಕೊಂಡಿದ್ದ ರೈತ ಮಂಜೇಗೌಡರ ಜಮೀನಿನಲ್ಲಿ ಬೋನು ಅಳವಡಿಸಿದ್ದರು. ಇದೀಗ ಬೋನಿಗೆ ಬಿದ್ದ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.