ಬೆಂಗಳೂರು: ದೆವ್ವದ ಹೆಸರಿನಲ್ಲಿ ಡೆಡ್ಲಿ ವೀಲ್ಹಿಂಗ್ ಮಾಡುತ್ತಿದ್ದ ಯುವಕರಿಗೆ ಸಂಚಾರಿ ಪೊಲೀಸರು ಚಳಿ ಬಿಡಿಸಿದ್ದಾರೆ.ಮೂವರನ್ನು ಬಂಧಿಸಿದ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಗಾಡಿಯನ್ನು ಜಪ್ತಿ ಮಾಡಿ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ವೀಲ್ಹಿಂಗ್ ಮಾಡುವಾಗ ದೆವ್ವದ ಮುಖವಾಡ ಧರಿಸುತ್ತಿದ್ದ ಇವರು ʼಡೆವಿಲ್ಸ್ ಆನ್ ರೋಡ್ʼ ಎಂದು ತಮ್ಮನ್ನ ತಾವು ಕರೆದುಕೊಳ್ಳುತ್ತಿದ್ದರು. ಈಗ ಡೆಡ್ಲಿ ವೀಲ್ಹಿಂಗ್ ಮಾಡುತ್ತಿದ್ದ ವೀಲರ್ಸ್‌ಗಳ ವಿರುದ್ಧ 14 ಪ್ರಕರಣ ದಾಖಲಾಗಿದೆ.
ವೀಲಿಂಗ್ ಬೈಕ್ ಸೀಝ್ ಮಾಡಿ ಪೋಷಕರಿಗೆ 25 ಸಾವಿರ ದಂಡ ವಿಧಿಸಿರುವ ಪೊಲೀಸರು ವೀಲಿಂಗ್ ಮಾಡ್ತಿದ್ದ ವೀಲರ್ಸ್ ಗಳ ವಿರುದ್ಧ 14 ಪ್ರಕರಣ ದಾಖಲು ಡೆವಿಲ್ಸ್ ಆನ್ ರೋಡ್ ಎಂದು ತಮ್ಮನ್ನ ತಾವು ಕರೆದುಕೊಂಡು ವೀಲಿಂಗ್ ಮಾಡ್ತಿದ್ದ ಆರೋಪಿಗಳು ಬೈಕ್ ಗಳನ್ನ ವಶಕ್ಕೆ ಪಡೆದು ಅದರ ಬಿಡಿಭಾಗವನ್ನ ತೆಗೆದ ಪೊಲೀಸರು ಆರೋಪಿಗಳ ಪ್ರೊಫೈಲ್ ತೆರೆದು ಅವರ ಚಟುವಟಿಕೆಗಳ ಬಗ್ಗೆ ಗಮನ ಹರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.