ಲಂಚ ಪಡೆಯುತ್ತಿದ್ದ  ಕೃಷಿ ಅಧಿಕಾರಿ ಎಸಿಬಿ ಬಲೆಗೆ; ಅಪಾರ ಅಕ್ರಮ ಸಂಪತ್ತಿನ ದಾಖಲೆ ಪತ್ತೆ!

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕಲಬುರಗಿ: ರೈತನಿಂದ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದ ಘಟನೆ ನಗರದಲ್ಲಿ ನಡೆದಿದೆ. ಕೃಷಿ ಸಲಕರಣೆಗಳಿಗೆ ರಿಯಾಯತಿ ಬಿಲ್ ಪಾಸ್ ಮಾಡಿಕೊಡಲು 50 ಸಾವಿರ ರೂ. ಲಂಚ ಪಡೆಯುವಾಗ ಜೇವರ್ಗಿ ತಾಲೂಕಿನ ಸಹಾಯಕ ಕೃಷಿ ಅಧಿಕಾರಿ ರೆಡ್‌ಹ್ಯಾಂಡ್ ಆಗಿ ಸಿಕ್ಕುಬಿದ್ದಿದ್ದಾರೆ.

Advertisement

ಜಿಲ್ಲೆಯ ಜೇವರ್ಗಿ ತಾಲೂಕಿನ ಸಹಾಯಕ ಕೃಷಿ ಅಧಿಕಾರಿ ಸುನೀಲ್ ಕುಮಾರ್ ಯರಗೋಳ್ ಎಸಿಬಿ ಬಲೆಗೆ ಬಿದ್ದವರು. ಕಲಬುರಗಿ ನಗರದ ಕನ್ನಡ ಭವನದ ಬಳಿ ರೈತರಿಂದ ಹಣ ಪಡೆಯುವಾಗಲೇ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಜೇವರ್ಗಿ ನಿವಾಸಿ ರೈತ ಶರಣಗೌಡ ಎನ್ನುವವರಿಗೆ ಸಬ್ಸಿಡಿ ಬಿಲ್ ಪಾಸ್ ಮಾಡಿಕೊಡಲು 1.5 ಲಕ್ಷ ರೂಪಾಯಿ ಲಂಚದ ಹಣಕ್ಕೆ ಅಧಿಕಾರಿ ಬೇಡಿಕೆ ಇಟ್ಟಿದ್ದ. ಐವತ್ತು ಸಾವಿರ ರೂ. ಹಣ ಪಡೆಯುವಾಗ ಎಸಿಬಿ ಎಸ್‌ಪಿ ಮಹೇಶ್ ಮೇಘಣ್ಣವರ ನೇತೃತ್ವದಲ್ಲಿ ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಅಧಿಕಾರಿಯ ಕಲಬುರಗಿ ನಿವಾಸದ ಮೇಲೆ ರೇಡ್ ಮಾಡಿರುವ ಪೊಲೀಸರು 9 ಲಕ್ಷ ರೂಪಾಯಿ ನಗದು ಹಣ, ಅಪಾರ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಆದಾಯ ಮೀರಿ ಖರೀದಿಸಿದ ಆಸ್ತಿಪಾಸ್ತಿ ದಾಖಲೆ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  


Spread the love

LEAVE A REPLY

Please enter your comment!
Please enter your name here