ಕೋಲಾರ: ಲಾಂಗು, ಮಚ್ಚು ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ ಇಬ್ಬರು ಯುವಕರನ್ನು ಪೊಲೀಸರು ಕೋಲಾರ ತಾಲೂಕಿನ ನರಸಾಪುರದಲ್ಲಿ ಬಂಧಿಸಿದ್ದಾರೆ.
Advertisement
ಅಕ್ರಮ ಶಸ್ತಾಸ್ತ್ರ ಕಾಯ್ದೆ ಪ್ರಕರಣದಡಿಯಲ್ಲಿ ನರಸಾಪುರದ ವೇಣು ಮತ್ತು ಪವನ್ ಕುಮಾರ್ ಅನ್ನು ಬಂಧಿಸಲಾಗಿದೆ. ಇತ್ತೀಚಿಗೆ ಯುವಕರು ಅಪರಾಧ ಪ್ರಕರಣಗಳಲ್ಲಿ ಹಚ್ಚಾಗಿ ಕಾಣಿಸಿಕೊಂಡಿದ್ದರು.
ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಟ್ಟಿದೆ.