ಕುಮಾರಸ್ವಾಮಿ ವಿರುದ್ಧ ಸಿನಿಮಾ ಮಾದರಿ ಪೋಸ್ಟರ್ ಅಂಟಿಸಿ ಆಕ್ರೋಶ

0
Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ‌.ಕುಮಾರಸ್ವಾಮಿ ವಿರುದ್ಧ ಮತ್ತೆ ಪೋಸ್ಟರ್ ವಾರ್ ಶುರುವಾಗಿದೆ. ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಕೆರಳಿದ ದುಷ್ಕರ್ಮಿಗಳು, ಸಿನಿಮಾ ಮಾದರಿಯ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಶೇಷಾದ್ರಿಪುರ ರಸ್ತೆ, ರಾಜಾಜಿನಗರ ಸೇರಿದಂತೆ ವಿವಿಧೆಡೆ ಪೋಸ್ಟರ್ ಅಂಟಿಸಿದ್ದಾರೆ.

Advertisement

ಕರೆಂಟ್ ಕಳ್ಳ ಖ್ಯಾತಿಯ ಹೆಚ್​ಡಿಕೆ ನಿರ್ಮಾಣದ ಚಿತ್ರ “ಪೆನ್ ಡ್ರೈವ್ ಬ್ರದರ್” ಪ್ರಾಮಾಣಿಕ ಕರೆಂಟ್ ಕಳ್ಳ ಖ್ಯಾತಿಯ ನಿರ್ದೇಶನ, ಬರೀ ಟೀಸರ್ ಗೆ ಇಷ್ಟೊಂದು ಟೆನ್ಶನ್ ಆದರೆ ಹೇಗೆ ಸಿನಿಮಾ ಇನ್ನೂ ಬಾಕಿಯಿದೆ. ರಾಧಾ, ಮಾರ, ಬ್ಲೂ ಬಾಯ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆ. ಚಿತ್ರದ ನಿರ್ಮಾಣದ ವೆಚ್ಚ 68,000 ಎಂದು ಪೋಸ್ಟರ್ ನಲ್ಲಿ ವ್ಯಂಗ್ಯವಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here