ಬೆಂಗಳೂರು: ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಿರಿಯ ನಟಿ ಲೀಲಾವತಿ ಅವರ ಮನೆಗೆ ಭೇಟಿ ನೀಡಿದ್ದಾರೆ. ನಟಿ ಲೀಲಾವತಿ ಅವರನ್ನ ದರ್ಶನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ವಯಸ್ಸಿನ ಕಾರಣದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರನ್ನ ನಟ ದರ್ಶನ್ ಭೇಟಿಯಾಗಿ ವಿನೋದ್ ರಾಜ್ ಬಳಿ ಯೋಗಕ್ಷೇಮ ವಿಚಾರಿಸಿದ್ದಾರೆ. ಕೆಲ ಹೊತ್ತು ಲೀಲಾವತಿ ಅವರ ಮನೆಯಲ್ಲಿದ್ದು ವಿನೋದ್ ರಾಜ್ ಬಳಿ ಸಾಕಷ್ಟು ವಿಚಾರಗಳ ಬಗ್ಗೆ ದರ್ಶನ್ ಮಾತನಾಡಿದ್ದಾರೆ.
Advertisement
ಇತ್ತೀಚಿನ ದಿನಗಳಲ್ಲಿ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಗೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಅರ್ಜುನ್ ಸರ್ಜಾ ಕೂಡ ಇತ್ತೀಚೆಗೆ ಅದೇ ಕೆಲಸ ಮಾಡಿದ್ದರು. 87 ವರ್ಷದ ಹಿರಿಯ ನಟಿ ಲೀಲಾವತಿಯವರು ಆರೋಗ್ಯ ಸಮಸ್ಯೆಯಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ