ಇಲಾಖೆಗಳ ವಿಲೀನಕ್ಕೂ , ಕಾಂಗ್ರೆಸ್ ನ ಗ್ಯಾರಂಟಿಗೂ, ಸಂಬಂಧ ಇಲ್ಲ: ಸತೀಶ್‌ ಜಾರಕಿಹೊಳಿ

0
Spread the love

ಬೆಳಗಾವಿ:- ಗ್ಯಾರಂಟಿ ಯೋಜನೆಗೂ, ಇಲಾಖೆಗಳ ವಿಲೀನಕ್ಕೂ, ನಂಟಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಳಗೆ ವಿಲೀನ ಮಾಡುವುದಕ್ಕೂ, ಗ್ಯಾರಂಟಿ ಯೋಜನೆಗೂ ಯಾವುದೇ ಸಂಬಂಧವಿಲ್ಲ. ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಳಗೆ ವಿಲೀನ ಮಾಡುವ ಪ್ರಕ್ರಿಯೆ 10 ವರ್ಷಗಳ ಹಿಂದಯೇ ನಡೆದಿದೆ ಎಂದರು

Advertisement

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಅನುದಾನ ಕೊರತೆಯಾಗಿದ್ದಕ್ಕೆ ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳನ್ನು ವಿಲೀನಗೊಳಿಸಲು ಸರ್ಕಾರ ಮುಂದಾಗಿದೆಯೇ?’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಲವು ಇಲಾಖೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ಅವಶ್ಯಕತೆ ಇಲ್ಲ.

ಹಾಗಾಗಿ ಈ ಇಲಾಖೆಗಳನ್ನು ವಿಲೀನಗೊಳಿಸುವ ಬಗ್ಗೆ 10 ವರ್ಷಗಳ ಹಿಂದೆಯೇ ವರದಿ ಕೊಟ್ಟಿದ್ದಾರೆ. ಈ ರೀತಿ ಹಿಂದಿನ ಸರ್ಕಾರಗಳಲ್ಲೂ ವಿಲೀನ ಪ್ರಕ್ರಿಯೆ ನಡೆದಿವೆ. ಗ್ಯಾರಂಟಿ ಯೋಜನೆಗಳಿಗೂ ಮತ್ತು ಇದಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು. ಕಾಂತರಾಜ್‌ ಆಯೋಗದ ವರದಿ ಜಾರಿಯಾದರೆ ಕಾಂಗ್ರೆಸ್ ಸರ್ಕಾರಕ್ಕೆ ತೊಂದರೆಯಾಗುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆಯೋಗದವರು ನಮಗೆ ಇನ್ನೂ ವರದಿಯನ್ನೇ ಕೊಟ್ಟಿಲ್ಲ. ವರದಿ ನೀಡಿದ ನಂತರ, ಅದರ ಬಗ್ಗೆ ಚರ್ಚೆಯಾಗಬೇಕು. ಅದಕ್ಕೆ ಸುದೀರ್ಘ ಪ್ರಕ್ರಿಯೆ ಬಾಕಿ ಇದೆ ಎಂದು ಹೇಳಿದರು.

ಕಾಂತರಾಜ್‌ ಆಯೋಗದ ವರದಿಯಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆಯೇ? ಎಂಬ ಪ್ರಶ್ನೆಗೆಪ್ರತಿಕ್ರಿಯಿಸಿದ ಅವರು, ಈ ವರದಿ ನೀಡಲು ಇನ್ನೂ ಎರಡು ತಿಂಗಳು ಸಮಯಾವಕಾಶ ಕೇಳಿದ್ದಾರೆ‌. ವರದಿ ಬಂದ ಬಳಿಕ ನೋಡೋಣ. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈ ಬಗ್ಗೆ ಚರ್ಚಿಸುತ್ತಾರೆ ಎಂದರು.


Spread the love

LEAVE A REPLY

Please enter your comment!
Please enter your name here