ಗಜೇಂದ್ರಗಡ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ಜರುಗಿದೆ.
Advertisement
ಇಲ್ಲಿನ ಗಜೇಂದ್ರಗಡ- ಕುಷ್ಟಗಿ ರಸ್ತೆಯಲ್ಲಿ ಈ ದುರ್ಘಟನೆ ಜರುಗಿದ್ದು, ಬೈಕ್‌ನಲ್ಲಿ ಹೊರಟಿದ್ದ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಾಲಬಂಡಿ ನಿವಾಸಿಗಳಾದ ಹಸನ್‌ಸಾಬ್,(೩೦) ದಾವಲ್‌ಸಾಬ್(೨೮) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಿಂಧನೂರನಿಂದ ಗಜೇಂದ್ರಗಡಕ್ಕೆ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಜರುಗಿದೆ.
ಘಟನಾ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.