ಧಾರವಾಡ: ಹುಬ್ಬಳ್ಳಿ, ಧಾರವಾಡದ ಅವಳಿನಗರಗಳಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕಗಳು ಬಹಳ ಹೊಲಸಾಗಿವೆ. ಅವುಗಳ ನಿರ್ವಹಣೆ ಸರಿಯಾಗಿಲ್ಲ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.
Advertisement
ಧಾರವಾಡದಲ್ಲಿ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ಘಟಕಗಳು ಬಹಳು ಹೊಲಸುತನದಿಂದ ಕೂಡಿವೆ. ಹುಬ್ಬಳ್ಳಿ, ಧಾರವಾಡ ಎರಡೂ ನಗರಗಳನ್ನು ನಾನು ಸುತ್ತಿ ನೋಡುತ್ತೇನೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದ ಹತ್ತಿರ ಚರಂಡಿ ನೀರು ಕೆಲ ಮನೆಗಳಿಗೆ ನುಗ್ಗಿದೆ ಎಂದು ದೂರು ಬಂದಿತ್ತು. ಈ ಸಂಬಂಧ ನಾಳೆ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದೇನೆ. ಇದರ ಬಗ್ಗೆ ಸುಧೀರ್ಘ ಚರ್ಚೆ ಮಾಡಲಿದ್ದೇನೆ ಎಂದರು.