ತುಮಕೂರು:- ಜಿಲ್ಲೆಯ ಮಧುಗಿರಿ ತಾಲೂಕಿನ ಜಡಗೊಂಡನಹಳ್ಳಿ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.
ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು, ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಶ್ರೀ ರಂಗಪ್ಪ (30)ಮೃತ ದುರ್ದೈವಿ.
ಆಂಧ್ರದ ರಾಡಪಲ್ಲಿ ಗ್ರಾಮದ ನಿವಾಸಿಯಾದ ಇವರು, ಮಧುಗಿರಿ ಕಡೆಯಿಂದ ಪಾವಗಡ ಹೋಗುತ್ತಿದ್ದರು. ಪಾವಗಡ ಕಡೆಯಿಂದ ಮಧುಗಿರಿ ಕಡೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಈ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.



