ಬೆಂಗಳೂರು: ಅಂಬಾರಿ ಹೊತ್ತ ಅರ್ಜುನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ದಸರಾ ಆನೆ ಅರ್ಜುನ ಪ್ರಾಣ ಕಳೆದುಕೊಂಡ ಜಾಗ ಹಾಗೂ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂಬಾರಿ ಹೊತ್ತ ಅರ್ಜುನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅರ್ಜುನನ ಸಾವಿನ ಕುರಿತು ಸಂಪೂರ್ಣ ಮಾಹಿತಿ ಕೇಳಿದ್ದೇನೆ.
Advertisement
ಅರ್ಜುನ ಆನೆ ಸಕಲೇಶಪುರದಲ್ಲಿ ಎಲ್ಲಿ ಪ್ರಾಣ ಕಳೆದುಕೊಂಡಿದ್ನೋ ಅಲ್ಲಿಯೇ ಸ್ಮಾರಕ ಮಾಡುತ್ತೇವೆ. ಹಾಗೂ ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕ ಮಾಡಲು ತಿಳಿಸಿದ್ದೇವೆ ಎಂದರು. ಅರ್ಜುನ ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದವನ ಅಚಾನಕ್ ಸಾವಾಗಿದೆ. ಆತ ಇನ್ನೂ ಹೆಚ್ಚು ಕಾಲ ಬದುಕಬೇಕಿತ್ತು, ಇನ್ನೊಂದು ಆನೆ ಕಾರ್ಯಾಚರಣೆಗೆ ಅರ್ಜುನ ನನ್ನ ಉಪಯೋಗಿಸಿದ ಕಾರಣ ಸಾವನಪ್ಪಿದೆ ಎಂದು ಸಿಎಂ ಹೇಳಿದರು.