ಹುಬ್ಬಳ್ಳಿ: ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಕೊಡಲಿ ಪೆಟ್ಟು ಹಾಕಬೇಕು ಅನ್ನೋದಾ ಮಾಜಿ ಸಿಎಂ ಕುಮಾರಸ್ವಾಮಿ ಅವರ ಉದ್ದೇಶ ಎಂದು ಸಚಿವ ಎಚ್ .ಕೆ. ಪಾಟೀಲ್ ಪ್ರಶ್ನಿಸಿದರು.
ನಗರದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಶಾಸಕರನ್ನ ಖರೀದಿ ವಸ್ತುಗಳನ್ನಾಗಿ ಮಾಡುವ ವಾತಾವರಣ ಸೃಷ್ಟಿ ಮಾಡ್ತಾ ಇದ್ದಾರೆ ಲೋಕಸಭಾ ಚುನಾವಣೆ ಚುನಾವಣೆ ನಂತರ ಕಾದು ನೋಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು,
ಸರ್ಕಾರವನ್ನು ಅಭದ್ರಗೊಳಿಸುವಂತ ಮಾತುಗಳು ಯಾವ ಪುರುಷಾರ್ಥಕ್ಕೆ, ಉದ್ದೇಶ ಏನು? ಎಂದು ಸಚಿವ ಎಚ್.ಕೆ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಸರ್ಕಾರವನ್ನು ಅಭದ್ರಗೊಳಿಸಿ, ಅಭಿವೃದ್ಧಿ ಕೆಲಸಗಳಿಗೆ ಕೊಡಲಿ ಪೆಟ್ಟು ಹಾಕಬೇಕು ಅನ್ನೋದಾ ಇದಿಯಾ? ಸರ್ಕಾರಗಳನ್ನ ಅಭದ್ರಗೊಳಿಸುವುದು ಒಂದು ರೀತಿ ಷಡ್ಯಂತ್ರ. ಜನರಿಗೆ ಕೆಲಸ ಆಗಬೇಕು.ಅಭಿವೃದ್ಧಿ ಕಡೆ ಗಮನ ಹರಿಸಬೇಕು. ಅದನ್ನು ಬಿಟ್ಟು ಮಾಧ್ಯಮಗಳ ಮೂಲಕ ಜನರ ಮನಸ್ಸನ್ನು ಅಭದ್ರಗೊಳಿಸುವ ಪ್ರಯತ್ನ ಯಶಸ್ವಿ ಆಗೋದಿಲ್ಲ ಇದು ಸರಿಯಲ್ಲ ಎಂದರು.
ಜನರಿಗೆ ಎಲ್ಲವೂ ತಿಳಿಯೋಕೆ ಪ್ರಾರಂಭವಾಗಿದ್ದು, ಎಂಎಲ್ಎ ಗಳನ್ನು ಖರೀದಿ ವಸ್ತುಗಳನ್ನಾಗಿ ಮಾಡುವ ವಾತಾವರಣ ಸೃಷ್ಟಿ ಮಾಡ್ತಾ ಇದ್ದಾರೆ. ಆ ವಾತಾವರಣಕ್ಕೆ ಯಾರು ಬಲಿ ಆಗೋದಿಲ್ಲ ಎಂದ ಅವರು, ಈ ಹಿಂದೆ 17 ಜನರನ್ನು ಮುಂಬೈ, ಗೋವಾಕ್ಕೆ ಕರೆದೋಯ್ದು ಖರೀದಿ ಮಾಡಿದ್ರು ಭಾರತೀಯ ಜನತಾ ಪಕ್ಷದವರು. ನಂತರ ಜನ ಅವರಿಗೆ ಯಾವ ರೀತಿ ಉತ್ತರಿಸಿದರು ಎಂಬುದನ್ನು ನೋಡಿದ್ದೀವಲ್ಲ, ಇಷ್ಟಾದ ಮೇಲೇನು ಮತ್ತೆ ಹಾಗೇ ಆಗುತ್ತೆ ಅಂತಾ ಯಾರಾದ್ರೂ ತಿಳಿದಿದ್ರೆ ಅದು ಅವರ ಭ್ರಮೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ ಹೇಳಿದರು.