ಬೆಂಗಳೂರು:- ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಪಂಚ ಗ್ಯಾರಂಟಿಗಳ ಪೈಕಿ ಕೊನೆಯ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಿದ್ದು, ಡಿಸೆಂಬರ್ ಮಾಸಾಂತ್ಯದ ವೇಳೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಲಾಗಿದ್ದ 5 ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೆ ಸರ್ಕಾರವು 4 ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಿದೆ. ಇದೀಗ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಗೊತ್ತಾಗಿದೆ.
ಸರ್ಕಾರದ ಉನ್ನತ ಮೂಲಗಳ ಪ್ರಕಾರ ಯುವ ನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಈ ಮಾಸಾಂತ್ಯದ ವೇಳೆಗೆ ಆರಂಭವಾಗಲಿದ್ದು, ಜನವರಿಯಲ್ಲಿ ಯೋಜನೆ ಅಧಿಕೃತವಾಗಿ ಚಾಲನೆ ಪಡೆದುಕೊಳ್ಳಲಿದೆ. ಯೋಜನೆಯ ನೋಂದಣಿ, ಸಹಾಯಧನ ಪಾವತಿ ಸೇರಿದಂತೆ ಸಂಪೂರ್ಣ ವಿವರ ನೀಡಲು ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್ ಡಿ.19 ಅಥವಾ 20ರಂದು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ