ದಾವಣಗೆರೆ: ನಿಮ್ಮ ಮನೆಗಳಿಗೆ ಟಿಪ್ಪು ನಿಲಯ ಅಥವಾ ಘಜ್ನಿ ಔರಂಗಜೇಬ ನಿಲಯ ಎಂದು ಇಟ್ಟುಕೊಳ್ಳಿ. ಆದರೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವುದನ್ನು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ವಿರುದ್ದ ಮಾಜಿ ಸಚಿವ ಎಂಪಿ ರೇಣುಕಾ ಚಾರ್ಯ ವಾಗ್ದಾಳಿ ಮಾಡಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರಿಗೆ ಟಿಪ್ಪು, ಬಾಬರ್, ಔರಂಗಜೇಬು, ಘಜ್ನಿ ಮಹಮ್ಮದ್ ಹೆಸರು ಮಾತ್ರ ನೆನಪು ಬರುತ್ತೆ. ಶಾಸಕರು,
ಸಚಿವರು ಟಿಪ್ಪು ಜಪ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ. ಓಟ್ ಬ್ಯಾಂಕ್ಗಾಗಿ ಅಲ್ಪಸಂಖ್ಯಾತರ ಜಪ ಮಾಡುತ್ತಾರೆ. ಕುಕ್ಕರ್ ಬ್ಲಾಸ್ಟ್ ಆದಾಗ ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಸಹೋದರರು ಅಂತ ಹೇಳುತ್ತಾರೆ. ಮೈಸೂರು ಮಹರಾಜ, ಸುತ್ತುರು ಶ್ರೀಗಳು ಸೇರಿದಂತೆ ದಾರ್ಶನಿಕರ ಹೆಸರು ಇಡೀ. ಆದರೆ ಓಟ್ ಬ್ಯಾಂಕ್ಗಾಗಿ ಈ ರೀತಿ ಮತಾಂದರ ಹೆಸರು ಜಪ ಮಾಡುತ್ತಾರೆ ಎಂದಿದ್ದಾರೆ.



