ಬೈಕ್ʼಗೆ ಕ್ರೊಸರ್ ವಾಹನ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

0
Spread the love

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ಬೈಕ್​ಗೆ ಕ್ರೊಸರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ. ಸಿದ್ದಪ್ಪ ಜಂಗಣ್ಣವರ (52) ಸಾವನ್ನಪ್ಪಿದ ರ್ದುದೈವಿ.

Advertisement

ಬೈಕ್​ಗೆ ಡಿಕ್ಕಿ ಹೊಡೆದ ಕ್ರೂಸರ್​, ಪೆಟ್ರೋಲ್ ಬಂಕ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಇದರಿಂದ ಕ್ರೊಸರ್​ನಲ್ಲಿದ್ದ 15 ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಮಿನಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here