ಚಿತ್ರನಟರೊಬ್ಬರ ಹುಚ್ಚು ಅಭಿಮಾನಕ್ಕೆ ಮೂವರ ದಾರುಣ ಅಂತ್ಯ
ಲಕ್ಷ್ಮೇಶ್ವರ/ಗದಗ
ಚಿತ್ರನಟರೊಬ್ಬರ ಹುಟ್ಟು ಹಬ್ಬದ ಅಂಗವಾಗಿ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಯುವಕರು ಮೃತಪಟ್ಟ ದಾರುಣ ಘಟನೆ ಮಧ್ಯರಾತ್ರಿ ಜರುಗಿದೆ.
ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಹನಮಂತ ಮಜ್ಜೂರಪ್ಪ ಹರಿಜನ (21), ಮುರಳಿ ನೀಲಪ್ಪ ನಡುವಿನಮನಿ (20) ಹಾಗೂ ನವೀನ ನೀಲಪ್ಪ ಗಾಜಿ (19) ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಮಂಜುನಾಥ ಹರಿಜನ, ದೀಪಕ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬ ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಿತ್ರನಟ ಯಶ್ ಅವರ ಹುಟ್ಟು ಹಬ್ಬದ ನಿಮಿತ್ತ ವಿದ್ಯುತ್ ಕಂಬಕ್ಕೆ ಬ್ಯಾನರ್ ಕಟ್ಟುತ್ತಿದ್ದಾಗ ಈ ದುರ್ಘಟನೆ ಜರುಗಿದೆ.
ಸುದ್ದಿ ತಿಳಿದು ಸಿಪಿಐ ನಾಗರಾಜ್ ಮಾಡಳ್ಳಿ, ಲಕ್ಷ್ಮೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿತ್ರನಟರೊಬ್ಬರ ಹುಚ್ಚು ಅಭಿಮಾನಕ್ಕೆ ಬಲಿಯಾದ ಯುವಕರ ಕುಟುಂಬಸ್ಥರ ಆಕ್ರಂಧನ ಮುಗಿಲ ಮುಟ್ಟಿದೆ.