HomePolitics Newsತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತು

ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ ಗಜೇಂದ್ರಗಡ : ಕಾಂಗ್ರೆಸ್‌ ಸರ್ಕಾರವು ಗ್ಯಾರಂಟಿಗಳಿಗೆ ಅನುದಾನವನ್ನು ಬಳಕೆ ಮಾಡುತ್ತಿದ್ದು, ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸುತ್ತಿದೆ ಎಂದು ವಿಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನತೆಯ ದಿಕ್ಕು ತಪ್ಪಿಸುವ ಕೆಲಸಕ್ಕೆ ಮುಂದಾಗಿದೆ ಎಂದು ಖನಿಜ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಪಟ್ಟಣದ ಕಡ್ಡಿ ಅವರ ಗೊಲಗೇರಿ ಅವರ ಪ್ಲಾಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಅಂದಾಜು ರೂ.೧ ಕೋಟಿ ವೆಚ್ಚದಲ್ಲಿ ಕೆಆರ್‌ಐಡಿಯಲ್‌ನಿಂದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ ಮಾಡುವ ಮೂಲಕ ನುಡಿದಂತೆ ನಡೆಯುತ್ತಿರುವುದನ್ನು ವಿಪಕ್ಷಗಳಿಗೆ ಸಹಿಸಲಾಗುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ಟೀಕಿಸಿದ್ದ ಕೇಂದ್ರ ಸರ್ಕಾರವು ಇಂದು ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ನಕಲು ಮಾಡುತ್ತಿರುವುದು ಅವರ ದ್ವಂದ್ವ ನೀತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.

ಈ ವೇಳೆ ರೋಣ ಹಾಗೂ ಗಜೇಂದ್ರಗಡ ತಾಲೂಕಿನ ೨೭ ಮೀನುಗಾರರಿಗೆ ಶಾಸಕ ಜಿ.ಎಸ್. ಪಾಟೀಲ ಸಲಕರಣೆ ಕಿಟ್ ವಿತರಿಸಿದರು. ಪುರಸಭೆ ವಿಪಕ್ಷ ನಾಯಕ ಮುರ್ತುಜಾ ಡಾಲಾಯತ್, ಸಿದ್ದಣ್ಣ ಬಂಡಿ, ಎ.ಡಿ. ಕೋಲಕಾರ, ಶ್ರೀಧರ ಬಿದರಳ್ಳಿ, ಶಿವರಾಜ ಘೋರ್ಪಡೆ, ರಾಜು ಸಾಂಗ್ಲೀಕರ, ಪ್ರಭು ಚವಡಿ, ಅಪ್ಪು ಮತ್ತಿಕಟ್ಟಿ, ಭಾಷಾ ಮುದಗಲ್, ಸುರೇಶ ಚವಡಿ, ಸುಭಾನಸಾಬ ಮ್ಯಾಗೇರಿ, ಎಚ್.ಎಸ್. ಸೋಂಪುರ, ಶರಣಪ್ಪ ಚಳಗೇರಿ, ವೆಂಕಟೇಶ ಮುದಗಲ್, ಶರಣಪ್ಪ ರೇವಡಿ, ಯಲ್ಲಪ್ಪ ಬಂಕದ ಮುಂತಾದವರಿದ್ದರು.

ಅಭಿವೃದ್ಧಿಪೂರಕ ಹಾಗೂ ಜನಪರವಾದ ಆಡಳಿತಕ್ಕೆ ಆದ್ಯತೆ ನೀಡುವ ಕಾಂಗ್ರೆಸ್ ಸರ್ಕಾರವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಲಿದ್ದು, ಬಿಜೆಪಿ ಸಂಸದರನ್ನು ಜನತೆ ಮನೆಗೆ ಕಳುಹಿಸಲು ನಿರ್ಣಯಿಸಿದ್ದಾರೆ, ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ. ತಾಲೂಕಿನ ಸಮಗ್ರ ಅಭಿವೃದ್ದಿಗೆ ಒತ್ತು ನೀಡಲಾಗಿದ್ದು, ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವುದರ ಜತೆಗೆ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!