ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಪರಿಹರಿಸುವ ಮನಸ್ಸಿಲ್ಲ

0
meravanige
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ಪ್ಯಾಸಿಸ್ಟ್ ದಾಳಿಯನ್ನು ಖಂಡಿಸಿ, ಭಾರತ ಡಬ್ಲ್ಯೂ.ಟಿ.ಓ.ದಿಂದ ಹೊರ ಬರಲು ಒತ್ತಾಯಿಸಿ ದೇಶಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿದ್ದರಿಂದ, ಸಂಯುಕ್ತ ಹೋರಾಟ ಕರ್ನಾಟಕ ಎಸ್.ಕೆ.ಎಮ್ ಕರೆಯ ಮೇರೆಗೆ ಕೊಪ್ಪಳ ನಗರದಲ್ಲಿ ಪಂಜಿನ ಪ್ರತಿಭಟನಾ ಮೆರವಣಿಗೆ, ಬಹಿರಂಗ ಸಭೆ ನಡೆಸಲಾಯಿತು.

Advertisement

ದ್ವೇಷದ ಕೋಮುವಾದಿ ರಾಜಕೀಯದಲ್ಲಿ ಪ್ರಾಣ ಕಳೆದುಕೊಂಡ ಬಿಜೆಪಿಯ ಕಾರ್ಯಕರ್ತರಿಗೆ ತಲಾ 20ರಿಂದ 50 ಲಕ್ಷ ರೂ ಪರಿಹಾರ ಕೊಡುವ ಕೇಂದ್ರ ಸರ್ಕಾರ, ದೆಹಲಿಯ ಐತಿಹಾಸಿಕ ಚಳುವಳಿಯಲ್ಲಿ ಪ್ರಾಣ ಅರ್ಪಿಸಿದ 780 ರೈತರ ಕುಟುಂಬಕ್ಕೆ ಒಂದು ರೂಪಾಯಿ ಪರಿಹಾರ ಕೊಟ್ಟಿಲ್ಲ. ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿಲ್ಲ. ರೈತರ ಸಾಲ ಮನ್ನಾ ಮಾಡಿಲ್ಲ, ಬೆಳೆ ನಷ್ಟ ಪರಿಹಾರ ಹಾಗೂ ಉದ್ಯೋಗ ಖಾತ್ರಿ ಕೂಲಿಯನ್ನು ಕೊಡುತ್ತಿಲ್ಲ.

ಈ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘ ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರ್, ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಬಸವರಾಜ್ ಶೀಲವಂತರ್, ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಜಿ.ನಾಗರಾಜ್, ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಸುಂಕಪ್ಪ ಗದಗ್, ಕೆ.ವಿ.ಎಸ್. ರಾಜ್ಯ ಕಾರ್ಯದರ್ಶಿ ದುರ್ಗೇಶ್, ಗುರುಬಸವ, ಸುನಿಲ್ ಜೋಶಿ, ಶರಣಬಸವ, ಸಿಐಟಿಯು ತಾಲೂಕಾ ಕಾರ್ಯದರ್ಶಿ ಗೌಸ್ ಸಾಬ್ ನದಾಫ, ಕರ್ನಾಟಕ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಬಸವರಾಜ್ ನರೇಗಲ್, ಅಲೆಮಾರಿ ಸಂಘದ ಜಿಲ್ಲಾಧ್ಯಕ್ಷ ಸಂಜಯ್ ದಾಸ್ ಕೌಜಗೇರಿ, ಭೀಮ ಆರ್ಮಿ ಕರ್ನಾಟಕ ಏಕತಾ ಮಿಷನ್ ಜಿಲ್ಲಾಧ್ಯಕ್ಷ ನಿಂಗು ಜಿ.ಎಸ್. ಬೇಣಕಲ್, ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಂಘಟನಾ ಸಂಚಾಲಕ ತುಕಾರಾಮ್ ಬಿ.ಪಾತ್ರೋಟಿ, ನಾಗರಾಜ್, ರಾಮಲಿಂಗಯ್ಯ ಶಾಸ್ತಿಮಠ ಮುಂತಾದವರು ಭಾಗವಹಿಸಿದ್ದರು.

ಮಾತು ತಪ್ಪಿದ ಮೋದಿ ಸರ್ಕಾರದ ವಿರುದ್ಧ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾರೆ. ಹೋರಾಟ ನಿರತ ರೈತರ ಮೇಲೆ ಗೋಲಿಬಾರ್ ಮಾಡಿ ಕೊಂದು ಹಾಕಿದೆ. ಲಾಠಿ ಚಾರ್ಜ್ ಮಾಡಿರುವುದು ಮತ್ತು ಹೊಗೆ ಬಾಂಬ್ ಹಾಕಿರುವುದು, ರಸ್ತೆಗಳಿಗೆ ಮೊಳೆ ಹೊಡೆದಿರುವುದು, ರಸ್ತೆಗೆ ದೊಡ್ಡ ಗಾತ್ರದ ಕಾಂಕ್ರೀಟ್ ಬ್ಲಾಕ್ ಹಾಕಿರುವ ಬೆಳವಣಿಗೆ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಪರಿಹರಿಸುವ ಮನಸ್ಸಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಸರ್ಕಾರದ ಫ್ಯಾಸಿಸ್ಟ್ ನೀತಿಯ ವಿರುದ್ಧ ದೇಶದ ಜನರು ಬೀದಿಗಿಳಿಯಬೇಕು ಎಂದು ಕರೆ ನೀಡಿದರು.

 


Spread the love

LEAVE A REPLY

Please enter your comment!
Please enter your name here