HomeEducationದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಕೆ

ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಕೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಸ್ಥಳೀಯ ಸ್ಟುಡೆಂಟ್ ಎಜ್ಯುಕೇಶನ್ ಸೊಸೈಟಿಯ ಸನ್ಮಾರ್ಗ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿ.ಯು.ಸಿ 2023-24ನೇ ಸಾಲಿನ ವಾರ್ಷಿಕ ಪರೀಕ್ಷೆಗಳು ಮಾ.1ರಿಂದ ಮಾ.22ರವರೆಗೆ ಜರುಗಲಿದ್ದು, ಮೊದಲನೆ ದಿನದ ಕನ್ನಡ ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ ಸಿಹಿ ವಿತರಿಸಿ, ವಿದ್ಯಾರ್ಥಿಗಳಿಗೆ ಧೈರ್ಯದಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಉತ್ಸಾಹ ತುಂಬಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಪ್ರಾಚಾರ್ಯರು, ಯಾವುದೇ ಗೊಂದಲಗಳಿಗೆ ಅವಕಾಶ ಕೊಡದೆ ಏಕಚಿತ್ತದಿಂದ, ಶಾಂತ ಮನಸ್ಸಿನಿಂದ ಉತ್ತರಗಳನ್ನು ಸೂಚನೆಗನುಸಾರವಾಗಿ ಬರೆಯುವಂತೆ ತಿಳಿಸಿದರು.

ಸಂಸ್ಥೆಯ ನಿರ್ದೇಶಕ ಪ್ರೊ. ಸೈಯದ್ ಮತೀನ್ ಮುಲ್ಲಾ, ಚೇರಮನ್ ಪ್ರೊ. ರಾಜೇಶ ಕುಲಕರ್ಣಿ, ಆಡಳಿತ ಮಂಡಳಿಯ ಸದಸ್ಯರಾದ ಪ್ರೊ. ಉಡುಪಿ ದೇಶಪಾಂಡೆ, ಪ್ರೊ. ರೋಹಿತ್ ಒಡೆಯರ್, ಪ್ರೊ. ರಾಹುಲ್ ಒಡೆಯರ್, ಆಡಳಿತಾಧಿಕಾರಿ ಎಂ.ಸಿ. ಹಿರೇಮಠ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಸಲಹೆ-ಸೂಚನೆಗಳನ್ನು ನೀಡಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ಪ್ರೊ. ಮುರಲೀಧರ ಸಂಕನೂರ, ಪ್ರೊ. ಎಚ್.ಎಸ್. ದಳವಾಯಿ, ಪ್ರೊ. ಪರಶುರಾಮ ಕೊಟ್ನಿಕಲ್, ಪ್ರೊ. ಆಯ್.ಆರ್. ಅಳವಂಡಿ, ಪ್ರೊ. ವಿಜಯಕುಮಾರ ಹೆಬಸೂರ, ಪ್ರೊ. ಸಂತೋಷ ನಾಗರಾಳ, ಪ್ರೊ. ಎಸ್.ಎಸ್. ವಜ್ರಬಂಡಿ, ಪ್ರೊ. ಡಿ.ಬಿ. ಕುಲಕರ್ಣಿ ಮತ್ತು ಸರ್ವ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img