HomeGadag Newsಡಿ.ಆರ್. ಪಾಟೀಲರಿಗೆ ಪ್ರಶಸ್ತಿ ಪ್ರದಾನ

ಡಿ.ಆರ್. ಪಾಟೀಲರಿಗೆ ಪ್ರಶಸ್ತಿ ಪ್ರದಾನ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಕಸಾಪ ವತಿಯಿಂದ ಶ್ರೀಮತಿ ಲಿಂಗಮ್ಮ ಮತ್ತು ಡಾ. ಚಿಕ್ಕಕೋಮಾರಿಗೌಡ ಹಾರೋಕೊಪ್ಪ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಮಾ. 3ರಂದು ಮಧ್ಯಾಹ್ನ 12ಕ್ಕೆ ಜರುಗಲಿದೆ.

ಲೋಕ ಶಿಕ್ಷಣ ಧರ್ಮದರ್ಶಿ ಮಂಡಳಿಯ ಟ್ರಸ್ಟಿ, ಗದುಗಿನ ಮಾಜಿ ಶಾಸಕ ಡಿ.ಆರ್. ಪಾಟೀಲ ಅವರಿಗೆ ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶಕುಮಾರ ಅವರು ಪ್ರಶಸ್ತಿ ಪ್ರದಾನ ಮಾಡುವರು.

ಗದಗ-ವಿಜಯಪುರ ರಾಮಕೃಷ್ಣ ವಿವೇಕಾನಂದಾಶ್ರಮದ ಅಧ್ಯಕ್ಷ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ಸಿ. ನಾರಾಯಣಸ್ವಾಮಿ, ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನ ಕೋಶಾಧ್ಯಕ್ಷ ಹಾಗೂ ದತ್ತಿ ದಾನಿಗಳಾದ ಡಾ. ಚಿಕ್ಕಕೋಮಾರಿಗೌಡ ಉಪಸ್ಥಿತರಿರುವರು ಎಂದು ಕಸಾಪ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ, ಡಾ. ಪದ್ಮಿನಿ ನಾಗರಾಜ, ಗೌರವ ಕೋಶಾಧ್ಯಕ್ಷ ಬಿ.ಎಂ. ಪಟೇಲಪಾಂಡು ತಿಳಿಸಿದ್ದಾರೆ.

ಡಿ.ಆರ್. ಪಾಟೀಲ ಅವರ ಅಭಿಮಾನಿಗಳು, ಹಿತೈಷಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಗುರಣ್ಣ ಬಳಗಾನೂರ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img