HomeGadag News`ಗ್ರಾಮೀಣಾಭಿವೃದ್ಧಿಯೇ ನಮ್ಮ ಸಂಕಲ್ಪ'

`ಗ್ರಾಮೀಣಾಭಿವೃದ್ಧಿಯೇ ನಮ್ಮ ಸಂಕಲ್ಪ’

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ನಾಗಾವಿಯ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದ ಸಭಾಂಗಣದಲ್ಲಿ ವಿಶ್ವ ವಿದ್ಯಾಲಯದ 4ನೇ ಘಟಿಕೋತ್ಸವವನ್ನು ಮಾ.6ರಂದು ಬೆಳಿಗ್ಗೆ 11.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಕುಲಪತಿ ವಿಷ್ಣುಕಾಂತ ಚಟಪಲ್ಲಿ ಹೇಳಿದರು.

pressmeet

ನಾಗಾವಿಯ ಆರ್.ಡಿ.ಪಿ.ಆರ್. ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಗ್ರಾಮೀಣಾಭಿವೃದ್ಧಿಯೇ ನಮ್ಮ ಸಂಕಲ್ಪ’ ಘೋಷವಾಕ್ಯದಡಿ ಜರುಗುವ 4ನೇ ಘಟಿಕೋತ್ಸವದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ, ಕೇಂದ್ರ ಸರಕಾರದ ಪಂಚಾಯತ್ ರಾಜ್ ಮಂತ್ರಾಲಯದ ಮಾಜಿ ಜಂಟಿ ಕಾರ್ಯದರ್ಶಿ ಡಾ. ಟಿ.ಆರ್. ರಘುನಂದನ ಅವರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

pressmeet

ಪಂಜಾಬ್ ಪ್ರಾಂತದಿಂದ ಕರ್ನಾಟಕಕ್ಕೆ ಆಗಮಿಸಿ ಕನ್ನಡ ಭಾಷೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಅಳವಡಿಸಿಕೊಂಡು ಅಚ್ಚ ಕನ್ನಡಿಗರಾಗಿ ಸಾರ್ಥಕ ಜೀವನ ನಡೆಸಿಕೊಂಡು ಬಂದಿರುವ ಐಎಎಸ್ ಅಧಿಕಾರಿ ಚಿರಂಜೀವ್ ಸಿಂಗ್ ಅವರಿಗೆ ಡಾಕ್ಟರ್ ಆಫ್ ಲಿಟರೇಚರ್ (ಡಿ.ಲಿಟ್) ಗೌರವ ಪದವಿ ಹಾಗೂ ಸಹಕಾರ ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಲ್ಲಿ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಮೂಲಕ ಅಧಿಕಾರದ ವಿಕೇಂದ್ರೀಕರಣಗೊಳಿಸುವ ಹಾಗೂ ನೀತಿ ನಿಯಮಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಾಗೂ ಪ್ರಸ್ತುತ ಕರ್ನಾಟಕ ರಾಜ್ಯದ 5ನೇ ಹಣಕಾಸು ಅಯೋಗದ ಅಧ್ಯಕ್ಷರಾಗಿ ಹಾಗೂ ಕರ್ನಾಟಕ ಪಂಚಾಯತ್ ರಾಜ್ ಪರಿಷತ್ತಿನ ಕಾರ್ಯಕಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸಿ. ನಾರಾಯಣಸ್ವಾಮಿ ಅವರಿಗೆ ಡಾಕ್ಟರ್ ಆಫ್ ಲಾಸ್ (ಎಲ್.ಎಲ್.ಡಿ) ಗೌರವ ಪದವಿ ನೀಡಲಾಗುತ್ತಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಡಾ. ಸುರೇಶ ನಾಡಗೌಡರ, ವಾರ್ತಾಧಿಕಾರಿ ವಸಂತ ಮಡ್ಲೂರ ಇದ್ದರು.

4ನೇ ಘಟಿಕೋತ್ಸವದಲ್ಲಿ 10 ವಿವಿಧ ಸ್ನಾತಕೋತ್ತರ ಕಾರ್ಯಕ್ರಮಗಳ 239 ವಿದ್ಯಾರ್ಥಿಗಳಿಗೆ ಹಾಗೂ 5 ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪದವಿಗಳನ್ನು ಪ್ರದಾನ ಮಾಡಲಾಗುವುದು. ಅದರಲ್ಲಿ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಅತ್ಯಧಿಕ ಅಂಕ ಗಳಿಸಿದ 11 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಎರಡು ಮತ್ತು ಮೂರನೇ ರ‍್ಯಾಂಕ್ ಗಳಿಸಿದ 10 ವಿದ್ಯಾರ್ಥಿಗಳಿಗೆ ಮೆರಿಟ್ ಪ್ರಮಾಣಪತ್ರ ನೀಡಲಾಗುತ್ತಿದೆ ಎಂದು ವಿಷ್ಣುಕಾಂತ ಚಟಪಲ್ಲಿ ಮಾಹಿತಿ ನೀಡಿದರು.

 


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!