ಸರ್ಕಾರದ ಆದೇಶ ಸ್ವಾಗತಾರ್ಹ: ಡಾ. ಹನುಮಂತಗೌಡ ಕಲ್ಮನಿ

0
kalmani
Spread the love

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದ 432 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಹತ್ತಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸುಮಾರು 11 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಳೆದ ನವಂಬರ್ ಮತ್ತು ಡಿಸೆಂಬರನಲ್ಲಿ ನಿರಂತರವಾಗಿ 45 ದಿನಗಳ ಅನಿರ್ದಿಷ್ಠಾವಧಿ ಹೋರಾಟ ಮಾಡಿದ ಪ್ರತಿಫಲವಾಗಿ ರಾಜ್ಯ ಸರ್ಕಾರವು ಜನವರಿ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕೈಗೊಂಡಿರುವ ಅತಿಥಿ ಉಪನ್ಯಾಸಕರ ಕುರಿತಾದ ನಿರ್ಣಯಗಳು ಸ್ವಾಗತಾರ್ಹವಾಗಿದೆ ಎಂದು ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ.ಹನುಮಂತಗೌಡ ಕಲ್ಮನಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೆಣ್ಣು ಮಕ್ಕಳಿಗೆ ವೇತನ ಸಹಿತ ಹೆರಿಗೆ ರಜೆ ಮತ್ತು ಅತಿಥಿ ಉಪನ್ಯಾಸಕರಿಗೆ ತಿಂಗಳಿಗೊಂದು ರಜೆಯ ಕುರಿತಾದ ವಿಷಯವನ್ನು ದೂರವಾಣಿ ಮೂಲಕ ಉನ್ನತ ಶಿಕ್ಷಣ ಸಚಿವರ ಗಮನಕ್ಕೆ ತರಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದನೆಯನ್ನು ನೀಡಿ, ಅವುಗಳನ್ನು ಕೆಲವೇ ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಪೀಟರ್ ಮತ್ತು ರಾಜ್ಯ ಪದಾಧಿಕಾರಿಗಳು, ಎಲ್ಲಾ ಜಿಲ್ಲೆಯ ಅಧ್ಯಕ್ಷರು, ಸಮಸ್ತ ಅತಿಥಿ ಉಪನ್ಯಾಸಕರು ಸರ್ಕಾರವನ್ನು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here