ಸಮಸ್ಯೆ ನಿವಾರಣೆಗೆ ಸಂಘಟಿತ ಹೋರಾಟ ಅಗತ್ಯ

0
samiti
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಸಾಮಾಜಿಕ ನ್ಯಾಯ ಮತ್ತು ನಮ್ಮ ಮೂಭೂತ ಹಕ್ಕುಗಳನ್ನು ಪಡೆದುಕೊಳ್ಳಲು ಸ್ಲಂ ಸಮಿತಿಯಿಂದ ನಿರಂತರ ಹೋರಾಟಗಳನ್ನು ನಡೆಸಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ಭೇಟಿ ನೀಡುವ ಜನಪ್ರತಿನಿಧಿಗಳು ಚುನಾವಣೆ ನಂತರ ಸ್ಲಂ ಜನರ ಸಮಸ್ಯಗಳಿಗೆ ಸ್ಪಂದಿಸುತ್ತಿಲ್ಲ. ಆದ್ದರಿಂದ ಸ್ಲಂ ಜನರ ಸಮಸ್ಯೆಗಳನ್ನು ನುವಾರಿಸಲು ಸಂಘಟಿತ ಹೋರಾಟ ಅಗತ್ಯವಾಗಿದೆ ಎಂದು ಸ್ಲಂ ಜನಾಂದೋಲನ-ಕರ್ನಾಟಕ ರಾಜ್ಯ ಸಂಚಾಲಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ತಿಳಿಸಿದರು.

Advertisement

ಅವರು ನಗರಸಭೆ ಉದ್ಯಾನವನದಲ್ಲಿ ಸ್ಲಂ ನಿವಾಸಿಗಳ ಹಾಗೂ ವಸತಿರಹಿತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನೈಜ್ ಗುಡಿಸಲು ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸದೇ ಇರುವುದರಿಂದ ಸ್ಲಂ ಪ್ರದೇಶಗಳು ಸೌಲಭ್ಯ ವಂಚಿತ ಪ್ರದೇಶಗಳಾಗಿವೆ. ನಮ್ಮ ಹಕ್ಕೊತ್ತಾಯಗಳಿಗೆ ಜನಪ್ರಧಿಗಳು ಮತ್ತು ಅಧಿಕಾರಿಗಳು ಸ್ಪಂದಿಸದೇ ಇದ್ದಲ್ಲಿ ಸ್ಲಂ ಸಮಿತಿಯಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದರು.

ಸ್ಲಂ ಸಮಿತಿ ಪದಾಧಿಕಾರಿಗಳಾದ ರವಿಕುಮಾರ ಬೆಳಮಕರ, ಅಶೋಕ ಕುಸಬಿ, ಪರವೀನಬಾನು ಹವಾಲ್ದಾರ, ಮೆಹರುನಿಸಾ ಢಾಲಾಯತ, ಇಬ್ರಾಹಿಮ ಮುಲ್ಲಾ, ಶಿವಾನಂದ ಶಿಗ್ಲಿ, ಸಾಕ್ರುಬಾಯಿ ಗೋಸಾವಿ, ಮೆಹಬೂಬಸಾಬ ಬಳ್ಳಾರಿ, ಬಾಷಾಸಾಬ ಡಂಬಳ, ದಾದು ಗೋಸಾವಿ, ಖಾಜಾಸಾಬ ಇಸ್ಮಾಯಿಲನವರ, ಶಿವಪ್ಪ ಲಕ್ಕುಂಡಿ, ಸಲೀಮ ಬೈರಕದಾರ, ಚಂದ್ರಿಕಾ ರೋಣದ, ಅಫ್ರೋಜಾ ಹುಬ್ಬಳ್ಳಿ, ಶೊಸೀಲಮ್ಮ ಗೊಂದರ, ಫೈರುಜಾ ಹುಬ್ಬಳ್ಳಿ, ಮೆಹರುನಿಸಾ ಡಂಬಳ, ತಿಪ್ಪಮ್ಮ ಕೊರವರ, ಕೌಸರ ಬೈರಕದಾರ, ವಿಶಾಲಕ್ಷಿ ಹಿರೇಗೌಡ್ರ, ನಗೀನಾ ಯಲಗಾರ, ಪೀರಮ್ಮ ನದಾಫ, ಜೈತುನಬಿ ಶಿರಹಟ್ಟಿ, ಲಕ್ಷ್ಮಿ ಮಣಿವಡ್ಡರ, ಶೋಭಾ ಹಿರೇಮಠ, ಮಕ್ತುಮಸಾಬ ಮುಲ್ಲಾನವರ ಹಾಗೂ ಗದಗ-ಬೆಟಗೇರಿ ನಗರದ ವಿವಿಧ ಸ್ಲಂ ಪ್ರದೇಶದ ನೂರಾರು ಸ್ಲಂ ನಿವಾಸಿಗಳು ಮತ್ತು ವಸತಿರಹಿತರು ಸಭೆಯಲ್ಲಿ ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here