ವಿಜಯಸಾಕ್ಷಿ ಸುದ್ದಿ, ರೋಣ : ರೋಣ ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಪುರಸಭೆಯ ಮುಖ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಆರೋಪಿಸಿ ಪುರಸಭೆಯ ಬಿಜೆಪಿ ಸದಸ್ಯರು ಹಾಗೂ ನಾಗರಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ಸದಸ್ಯ ಸಂತೋಷ ಕಡಿವಾಲ ಮಾತನಾಡಿ, ಪುರಸಭೆಯ ಅಧಿಕಾರಿಗಳು ಪಟ್ಟಣದ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುತ್ತಿಲ್ಲ. ಪಟ್ಟಣದಲ್ಲಿ ನೂರಾರು ಸಮಸ್ಯೆಗಳಿದ್ದರೂ ಅವುಗಳನ್ನು ಬಗೆಹರಿಸುವಲ್ಲಿ ನಿಷ್ಕಾಳಜಿ ವಹಿಸುತ್ತಿರುವುದು ನೊವಿನ ಸಂಗತಿಯಾಗಿದೆ. ಮುಖ್ಯವಾಗಿ ಸ್ಮಶಾನ ರಸ್ತೆಯನ್ನು ಅಭಿವೃದ್ಧಿಪಡಿಸದೆ ಬಿಟ್ಟಿರುವುದು ಖಂಡನೀಯ ಎಂದರು.
ಮುಖಂಡ ಅಶೋಕ ದೇಶಣ್ಣವರ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿ ಎಂದು ಮುಖ್ಯಾಧಿಕಾರಿಗಳ ಬಳಿ ಹೊದರೆ ಮೋಟಾರ್ ಸುಟ್ಟಿದೆ ಎಂದು ತಿಳಿಸುತ್ತಾರೆ. ವಾಪಸ್ಸು ಸುಟ್ಟ ಮೋಟಾರನ್ನು ಮತ್ತೆ ಇಳಿಸಿ ಜನರಿಗೆ ಮೊಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಅವರು, ಸಮಸ್ಯೆಯನ್ನು ತಕ್ಣ ನಿವಾರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ ನಾಗರಿಕರು ಉಪಸ್ಥಿತರಿದ್ದರು.