ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಚುನಾವಣಾ ಬಾಂಡ್ ಪ್ರಕರಣವು ಕೇಂದ್ರ ಸರ್ಕಾರವನ್ನು ತೀವ್ರ ಸ್ವರೂಪದಲ್ಲಿ ಕಾಡುತ್ತಿದೆ. ತನ್ನ ರಕ್ಷಣೆಗಾಗಿ ತರಾತುರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿ.ಎ.ಎ) ಕೇಂದ್ರ ಸರಕಾರ ಜಾರಿಗೆ ತಂದಿದೆ. ಸರಕಾರದ ಈ ನಡೆಯು ಜನರ ಗಮನ ಬೇರೆಡೆಗೆ ಸೆಳೆಯುವ ಹುನ್ನಾರವಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.
Advertisement
ದೇಶದ ಜನಸಾಮಾನ್ಯರ ನೈಜ ಸಮಸ್ಯೆಗಳ ಕಡೆ ಗಮನ ಹರಿಸುತ್ತಿಲ್ಲ. ರೈತರ ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ. ಕೃಷಿ ಕಾಯ್ದೆ ಹೇರಿ ಅವರನ್ನೂ ಕಾಡಲಾಗುತ್ತಿದೆ. ರೈತರು ಬೀದಿಗಿಳಿದಿದ್ದಾರೆ. ನಿರುದ್ಯೋಗಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಗ್ರಹಬಳಕೆಯ ಆಹಾರ ವಸ್ತುಗಳ ದರಗಳ ಏರಿಕೆಯಿಂದ ಜನರು ತತ್ತರಿಸುತ್ತಿದ್ದಾರೆ. ಈ ಪ್ರಮುಖ ಸಮಸ್ಯೆಗಳ ಕಡೆಗೆ ಗಮನ ಹರಿಸುತ್ತಿಲ್ಲ ಎಂದಿದ್ದಾರೆ.