HomeEducationಪಿಯು ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ಚಾಲನೆ

ಪಿಯು ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ಚಾಲನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ಈ ಭಾಗದಲ್ಲಿಯ ಸುತ್ತಮುತ್ತಲಿನ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ನಂತರದ ಪಿಯುಸಿ ಕಲಿಯುವುದಕ್ಕಾಗಿ ಈ ಕಾಲೇಜಿಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ. ಈ ಕಾರಣಕ್ಕಾಗಿ ಹೆಚ್ಚುವರಿ ಕೊಠಡಿಗಳ ಅವಶ್ಯಕತೆ ಇತ್ತು. ಅದಕ್ಕಾಗಿ ಕಾಲೇಜಿನಲ್ಲಿ ನೂತನವಾಗಿ 50 ಲಕ್ಷ ರೂ ವೆಚ್ಚದಲ್ಲಿ ಎರಡು ಕೊಠಡಿಗಳ ನಿರ್ಮಾಣ, ವಿದ್ಯುದೀಕರಣ, ಮಳೆ ನೀರು ಕೊಯ್ಲು ಇಂಗು ಗುಂಡಿ, ಹಾಗೂ ಕೊಠಡಿಗಳಿಗೆ ಡೆಸ್ಕ್ ಪೂರೈಸುವುದಕ್ಕೆ ಇಂದು ಚಾಲನೆ ನೀಡಲಾಗಿದೆ.

ಗುತ್ತಿಗೆದಾರರು ನಿಗದಿತ ಸಮಯದಲ್ಲಿ ಗುಣಮಟ್ಟದ ಕೆಲಸ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಹೇಳಿದರು.

ಗ್ರಾ.ಪಂ ಅಧ್ಯಕ್ಷೆ ಹೇಮಾ ಹರ್ಲಾಪೂರ, ರವಿ ಗೌಡ್ರ, ರಾಘು ಬಳ್ಳಾರಿ, ಶೇಖರ ಆದಂ, ಬಸವರಾಜ ಪೂಜಾರ, ಭರತ ಪೂಜಾರ, ಅಪ್ಪು ಪೂಜಾರ, ಶರಣಪ್ಪ ಹರ್ಲಾಪೂರ, ಸಿದ್ದಣ್ಣ ಅಂಗಡಿ, ಬಸಪ್ಪ ವಡ್ಡಟ್ಟಿ, ಸಿದ್ದಣ್ಣ ಮುಧೋಳ, ಅಂದಪ್ಪ ಕೋರಿ, ಮುಖ್ಯೋಪಾಧ್ಯಾಯ ವೆಂಕಟೇಶ ಅರ್ಕಸಾಲಿ, ಪಿಡಬ್ಲ್ಯೂಡಿ ಎಇಇ ಫಕ್ಕೀರೇಶ ತಿಮ್ಮಾಪೂರ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img