• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home hubballi

ಕಿಮ್ಸ್ ವೈದ್ಯರ ಸೇವೆ ಶ್ಲಾಘನೀಯ

News Desk by News Desk
March 15, 2024
in hubballi
kims
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದ ಜನರಿಗೆ ಕಿಮ್ಸ್ ಸಂಸ್ಥೆಯು ಉತ್ತಮ ಚಿಕಿತ್ಸೆ ನೀಡುತ್ತಿದೆ. ಈ ಸಂಸ್ಥೆಯ ವೈದ್ಯರ ಸೇವೆ ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್‌ನ ಅಧ್ಯಕ್ಷ ಜಿ.ಎಸ್. ಪಾಟೀಲ್ ಹೇಳಿದರು.

ಗುರುವಾರ ಹುಬ್ಬಳ್ಳಿಯ ಕಿಮ್ಸ್ನ ಆಡಿಟೋರಿಯಂನಲ್ಲಿ ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ವತಿಯಿಂದ ಸಿ.ಎಸ್.ಆರ್. ನಿಧಿಯಡಿ ರೂ.1.75 ಕೋಟಿ ರೂ ವೆಚ್ಚದ ವೈದ್ಯಕೀಯ ಉಪಕರಣಗಳಾದ ನ್ಯೂಯೋನಟಲ್, ಇನ್ಕುಬೇಟರ್ಸ್ ಮತ್ತು ಆಪರೇಟಿಂಗ್ ಲ್ಯಾಪ್ರೋಸ್ಕೋಪಿ ಖರೀದಿಗಾಗಿ ಕಿಮ್ಸ್ಗೆ ಚೆಕ್ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

1957ರಲ್ಲಿ ಕಿಮ್ಸ್ ಸಂಸ್ಥೆಯನ್ನು ಸ್ಥಾಪಿಸಲಾಯಿತು. ಕಿಮ್ಸ್ ಇಂದು ಹೆಮ್ಮರವಾಗಿ ಬೆಳೆದಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ನನ್ನ ತಂದೆ-ತಾಯಿಯವರು ಸಹ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಪ್ರತಿನಿತ್ಯ 4 ಸಾವಿರಕ್ಕೂ ಅಧಿಕ ರೋಗಿಗಳು ಇಲ್ಲಿ ದಾಖಲಾಗುತ್ತಾರೆ. ಸಾವಿರಕ್ಕೂ ಅಧಿಕ ವೈದ್ಯರು ಕಾರ್ಯನಿರ್ವಹಿಸುತ್ತಿದ್ದು, ಈ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದು ಅನೇಕರು ಗುಣಮುಖರಾಗಿದ್ದಾರೆ. ದೇಶದಲ್ಲಿ 100 ಗರ್ಭಿಣಿಯರಲ್ಲಿ 97 ಗರ್ಭಿಣಿಯರು ಹೆರಿಗೆ ಸಮಯದಲ್ಲಿ ಅಸುನೀಗುತ್ತಿದ್ದಾರೆ ಎಂದರು.

ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ಬಯ್ಯ ಪ್ರಸಾದ ಮಾತನಾಡಿ, ಉತ್ತರ ಕರ್ನಾಟಕಕ್ಕೆ ಕಿಮ್ಸ್ ಸಂಸ್ಥೆ ಸಂಜೀವಿನಿಯಾಗಿದೆ. ಬೇರೆ ಖಾಸಗಿ ಆಸ್ಪತ್ರೆಯಲ್ಲಿ ಇಂತಹ ಸೇವೆ ದೊರೆಯುವುದಿಲ್ಲ. ಕೋವಿಡ್ ಸಂದರ್ಭದಲ್ಲಿ ನಾನು ಸಹ ಇಲ್ಲಿ ದಾಖಲಾಗಿದ್ದೆ. ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಗುಣಮುಖರಾಗುವಂತೆ ವೈದ್ಯರು ಮಾಡಿದರು. ವೈದ್ಯರು ಮಾನವೀಯತೆ, ಮನುಷ್ಯತ್ವವನ್ನು ಹೊಂದಬೇಕಾಗಿದೆ. ಹೊಸ ಆವಿಷ್ಕಾರ, ಹೊಸ ತಂತ್ರಜ್ಞಾನವನ್ನು ನಾವು ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ. ವಿವಿಧ ರೋಗಗಳ ಕುರಿತು ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕಿದೆ. ಕಿಮ್ಸ್ಗೆ ಹೆಚ್ಚಿನ ಅನುದಾನವನ್ನು ತರುವಲ್ಲಿ ಪ್ರಾಮಾಣಿಕವಾದ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡದರು.

ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ಮಾತನಾಡಿ, ಕಿಮ್ಸ್ ಸಂಸ್ಥೆ ಅತಿ ಶ್ರೇಷ್ಠ ಸಂಸ್ಥೆಯಾಗಿದೆ. ಸಿ.ಎಸ್.ಆರ್. ನಿಧಿಯ ಸದ್ಬಳಕೆಯಾಗಬೇಕು. ಬಡವರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯು ದೊರೆಯುವಂತಾಗಬೇಕಿದೆ ಎಂದರು.

ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಮಾಜಿ ಸಂಸದ ಪ್ರೊ. ಐ.ಜಿ. ಸನದಿ, ಎ.ಎಂ. ಕುಲಕರ್ಣಿ, ಬಿ.ಜಿ. ವಸ್ತçದ, ಡಾ. ಸಿ.ಎಸ್. ಪಾಟೀಲ, ಐ.ಎಸ್. ಪಾಟೀಲ, ಮುಖಂಡರಾದ ಅನಿಲಕುಮಾರ ಪಾಟೀಲ, ಶರಣಪ್ಪ ಪಟಗಿ, ಕಿಮ್ಸ್ ಪ್ರಾಂಶುಪಾಲ ಡಾ.ಈಶ್ವರ ಹೊಸಮನಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು. ಸುಕನ್ಯಾ ಪ್ರಾರ್ಥಿಸಿದರು. ಕಿಮ್ಸ್ ನಿರ್ದೇಶಕ ಡಾ. ಎಸ್.ಎಫ್. ಕಮ್ಮಾರ ಸ್ವಾಗತಿಸಿದರು. ಡಾ.ರಾಜಶೇಖರ ದ್ಯಾಬೇರಿ ನಿರೂಪಿಸಿದರು.

ರಾಜ್ಯದಲ್ಲಿ ಹೆರಿಗೆ ಸಂದರ್ಭದಲ್ಲಿ 1000ರಲ್ಲಿ 24 ಮಕ್ಕಳು ಸಾವಿಗೀಡಾಗುತ್ತಿದ್ದು, ಸುಧಾರಿತ-ಆಧುನಿಕ ಯಂತ್ರೋಪಕರಣಗಳನ್ನು ಬಳಕೆ ಮಾಡಿಕೊಳ್ಳಬೇಕು. ಹೀಗಾಗಿ ಕಿಮ್ಸ್ಗೆ ಅವಶ್ಯಕವಿರುವ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗುತ್ತಿದೆ. ಗದಗ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಈ ಭಾಗದ ಊರುಗಳ ಜನರಿಗೆ ಒಳ್ಳೆಯ ಚಿಕಿತ್ಸೆ ನೀಡುವಲ್ಲಿ ವೈದ್ಯರು ಮುಂದಾಗಬೇಕು ಎಂದು ಜಿ.ಎಸ್. ಪಾಟೀಲ ತಿಳಿಸಿದರು.

Tags: Incubators and operating laparoscopyKarnataka Sewerage Development Board Chairman Abbayya PrasadKarnataka State Minerals CorporationKim's AuditoriumKim's InstitutePresident G.S. Patil
ShareSendShare
Previous Post

ಮೇ 31ರವರೆಗೆ ನೋಂದಣಿ ಕಾರ್ಯ

Next Post

ತಂತ್ರಜ್ಞಾನ ಕ್ಷೇತ್ರದಲ್ಲಿ ವಿಫುಲ ಅವಕಾಶ

News Desk

News Desk

Next Post
college

ತಂತ್ರಜ್ಞಾನ ಕ್ಷೇತ್ರದಲ್ಲಿ ವಿಫುಲ ಅವಕಾಶ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಗೃಹಜ್ಯೋತಿಗೆ ಸರ್ಕಾರದ ಹೊಸ ರೂಲ್ಸ್! ಹೊರರಾಜ್ಯದವರಿಗೆ ಶಾಕ್, ಮನೆ ಮನೆಗೆ ಪರಿಶೀಲನೆ; ಡಬಲ್ ಸಂಪರ್ಕ ಕಟ್

ಸಿಎಂ ಆದ ಬಳಿಕ ಮೊದಲ ಬಾರಿ ಇಂದು ಮಂಡ್ಯಕ್ಕೆ ಡಿಕೆಶಿ ಭೇಟಿ: 1,793 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

October 31, 2026
ನಂದಿನಿ ಹಾಲು, ಮೊಸರು ದರ ಏರಿಕೆ: ನವೆಂಬರ್ 1ರಿಂದಲೇ ಹೊಸ ದರ ಜಾರಿ, ಇಲ್ಲಿದೆ ಪರಿಷ್ಕೃತ ಬೆಲೆಪಟ್ಟಿ!

ನಂದಿನಿ ಹಾಲು, ಮೊಸರು ದರ ಏರಿಕೆ: ನವೆಂಬರ್ 1ರಿಂದಲೇ ಹೊಸ ದರ ಜಾರಿ, ಇಲ್ಲಿದೆ ಪರಿಷ್ಕೃತ ಬೆಲೆಪಟ್ಟಿ!

October 31, 2026
ಹಾಸನಾಂಬೆ ದರ್ಶನೋತ್ಸವ: ಎರಡನೇ ದಿನವೂ ದೇವಸ್ಥಾನದಲ್ಲಿ ಜನವೋ ಜನ

ಹಾಸನಾಂಬೆ ದರ್ಶನೋತ್ಸವ: ಎರಡನೇ ದಿನವೂ ದೇವಸ್ಥಾನದಲ್ಲಿ ಜನವೋ ಜನ

October 31, 2026
Breaking News: ರಾಜ್ಯಾದ್ಯಂತ ಎಫ್‌ಡಿಎ ದಾಳಿ: 8 ಕುಡಿಯುವ ನೀರಿನ ಘಟಕಗಳಿಗೆ ಬೀಗ

Breaking News: ರಾಜ್ಯಾದ್ಯಂತ ಎಫ್‌ಡಿಎ ದಾಳಿ: 8 ಕುಡಿಯುವ ನೀರಿನ ಘಟಕಗಳಿಗೆ ಬೀಗ

October 31, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಗೃಹಜ್ಯೋತಿಗೆ ಸರ್ಕಾರದ ಹೊಸ ರೂಲ್ಸ್! ಹೊರರಾಜ್ಯದವರಿಗೆ ಶಾಕ್, ಮನೆ ಮನೆಗೆ ಪರಿಶೀಲನೆ; ಡಬಲ್ ಸಂಪರ್ಕ ಕಟ್

ಸಿಎಂ ಆದ ಬಳಿಕ ಮೊದಲ ಬಾರಿ ಇಂದು ಮಂಡ್ಯಕ್ಕೆ ಡಿಕೆಶಿ ಭೇಟಿ: 1,793 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

October 31, 2026
ನಂದಿನಿ ಹಾಲು, ಮೊಸರು ದರ ಏರಿಕೆ: ನವೆಂಬರ್ 1ರಿಂದಲೇ ಹೊಸ ದರ ಜಾರಿ, ಇಲ್ಲಿದೆ ಪರಿಷ್ಕೃತ ಬೆಲೆಪಟ್ಟಿ!

ನಂದಿನಿ ಹಾಲು, ಮೊಸರು ದರ ಏರಿಕೆ: ನವೆಂಬರ್ 1ರಿಂದಲೇ ಹೊಸ ದರ ಜಾರಿ, ಇಲ್ಲಿದೆ ಪರಿಷ್ಕೃತ ಬೆಲೆಪಟ್ಟಿ!

October 31, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper