ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಎಸ್.ಎಂ.ಕೆ. ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 12ರಲ್ಲಿ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಕೃತಕ ಬುದ್ಧಿಮತ್ತೆ ಹಾಗೂ ಅಂತರ್ಜಾಲ ಪ್ರಯೋಗಾಲಯ ಮತ್ತು ಗೌರವ ಘಟಕವನ್ನು ಶನಿವಾರ ಉದ್ಘಾಟಿಸಿದರು.
Advertisement
ಈ ಸಂದರ್ಭದಲ್ಲಿ ಅಶೋಕ ಮಂದಾಲಿ, ಎಸ್.ಎನ್. ಬಳ್ಳಾರಿ, ಬಸವರಾಜ ಕಡೆಮನಿ, ಲಕ್ಷ್ಮಿ ಸಿದ್ಧಮ್ಮನಹಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ, ಮುಖ್ಯೋಪಾಧ್ಯಾಯ ಎಸ್.ಸಿ. ನಾಗರಹಳ್ಳಿ, ಎಚ್.ಆರ್. ಕೋನೆಮನಿ, ವಿವಿಧ ಗಣ್ಯರು, ಹಿರಿಯರು ಹಾಜರಿದ್ದರು.