• About
  • Advertise
  • Privacy & Policy
  • Contact
Tuesday, November 10, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ನ್ಯಾಯಸಮ್ಮತ, ನಿರ್ಭೀತ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ

News Desk by News Desk
March 17, 2024
in Politics News
press meet
0
SHARES
2
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನ್ಯಾಯಸಮ್ಮತವಾಗಿ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದರು.

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ ಕುರಿತು ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿದ್ದು, 65-ಶಿರಹಟ್ಟಿ, 66-ಗದಗ, 67-ರೋಣ ವಿಧಾನಸಭಾ ಕ್ಷೇತ್ರಗಳು, 10-ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ. ಇನ್ನುಳಿದ 68-ನರಗುಂದ ವಿಧಾನಸಭಾ ಕ್ಷೇತ್ರವು 3-ಬಾಗಲಕೋಟ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ ಎಂದರು.

ಪ್ರತಿ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಬಗ್ಗೆ ನಿಗಾ ಇಡಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 2ರಂತೆ ಒಟ್ಟು 8 ಲೆಕ್ಕ ತಂಡಗಳನ್ನು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಒಟ್ಟು 4 ಸಹಾಯಕ ವೆಚ್ಚ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಭಾರತ ಚುನಾವಣಾ ಆಯೊಗದ ನಿರ್ದೇಶನಗಳಂತೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗೆ ಸಂಬಂಧಿಸಿದಂತೆ ಗೋಡೆ ಬರಹ, ಪೋಸ್ಟರ್, ಬ್ಯಾನರ್‌ಗಳನ್ನು ಗುರುತಿಸಿ ಸದರಿ ಎಲ್ಲಾ ಪೋಸ್ಟರ್/ಬ್ಯಾನರ್‌ಗಳನ್ನು ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮಾತನಾಡಿ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯುತ ಮತದಾನ ನಡೆಯುವಂತಾಗಲು ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿರಹಟ್ಟಿ, ಗದಗ ಹಾಗೂ ರೋಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 10 ಚೆಕ್‌ಪೋಸ್ಟ್ಗಳನ್ನು ಹಾಗೂ ಬಾಗಲಕೋಟೆ ಲೋಕಸಭಾ ಕ್ಷೇತ್ರದ ನರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಚೆಕ್‌ಪೋಸ್ಟ್ಗಳನ್ನು ತೆರೆಯಲಾಗಿದ್ದು, 24*7 ಕೆಲಸ ನಿರ್ವಹಿಸಲು ಕ್ರಮ ಜರುಗಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯು ಮತದಾನವಾಗಲು ಮುಂಜಾಗ್ರತಾ ಕ್ರಮವಾಗಿ ಗೂಂಡಾ ಹಾಗೂ ರೌಡಿಗಳ ಗಡಿಪಾರಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ 1500 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯತ ಸಿಇಒ ಭರತ್ ಎಸ್. ಮಾತನಾಡಿ, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಪ್ರಚಾರ ಸಭೆ ವೀಕ್ಷಣೆ, ಮಾದರಿ ಸಂಹಿತೆ ಪಾಲನೆ ಕುರಿತು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 9ರಂತೆ ಒಟ್ಟು 36 ಸಂಚಾರಿ ದಳಗಳನ್ನು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 3ರಂತೆ ಒಟ್ಟು 12 ವಿಡಿಯೋ ಕಣ್ಗಾವಲು ತಂಡಗಳನ್ನು, ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಂದರಂತೆ 4 ವಿಡಿಯೋ ವೀಕ್ಷಣಾ ತಂಡಗಳನ್ನು ರಚಿಸಲಾಗಿದೆ ಎಂದರು.

ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆಯಾಗದಿದ್ದಲ್ಲಿ, ದೂರುಗಳಿದ್ದಲ್ಲಿ ಸಾರ್ವಜನಿಕರು 1950 ಟೋಲ್ ಫ್ರೀ ನಂಬರ್‌ಗೆ ಕರೆ ಮಾಡಿ ದೂರು ನೀಡಬಹುದು. ಇಲ್ಲವಾದಲ್ಲಿ ಸಿ-ವಿಗಿಲ್ ಆ್ಯಪ್‌ನಲ್ಲೂ ದೂರು ದಾಖಲಿಸಬಹುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಹಾಜರಿದ್ದರು.

10-ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಹಾವೇರಿ ಜಿಲ್ಲಾಧಿಕಾರಿಗಳು, 3-ಬಾಗಲಕೋಟ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬಾಗಲಕೋಟ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುವರು. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು-65 ಶಿರಹಟ್ಟಿ, 66-ಗದಗ ಉಪವಿಭಾಗಾಧಿಕಾರಿಗಳು ಗದಗ-66, ಡಿಯುಡಿಸಿ ಯೋಜನಾ ನಿರ್ದೇಶಕರು ರೋಣ-67 ಮತಕ್ಷೇತ್ರಕ್ಕೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯಾವಹಾರಗಳ ಇಲಾಖೆಯ ಉಪನಿರ್ದೇಶಕರು ನರಗುಂದ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.
– ವೈಶಾಲಿ ಎಂ.ಎಲ್.
ಜಿಲ್ಲಾಧಿಕಾರಿಗಳು, ಗದಗ.

ಮತದಾರರ ವಿವರ
ಇದುವರೆಗೆ ಜಿಲ್ಲೆಯಲ್ಲಿ 4,40,927 ಪುರುಷ ಮತದಾರರು, 4,42,647 ಮಹಿಳಾ ಮತದಾರರು, 60 ಇತರೆ ಮತದಾರರು ಹೀಗೆ ಒಟ್ಟು 8,83,634 ಮತದಾರರು ಇರುತ್ತಾರೆ. ಜಿಲ್ಲೆಯಲ್ಲಿ ಈವರೆಗೆ 18-198 ವಯೋಮಾನದ ಒಟ್ಟು 23665 ಯುವ ಮತದಾರರ ಹೆಸರುಗಳನ್ನು ಸೇರ್ಪಡೆಗೊಂಡಿವೆ. ಜಿಲ್ಲೆಯಲ್ಲಿ ಈವರೆಗೆ 11897 ದಿವ್ಯಾಂಗ ಚೇತನರು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. 85 ವರ್ಷ ವಯೋಮಿತಿ ಮೀರಿದ ಹಿರಿಯ ನಾಗರಿಕರು 5747 ಜನ ಮತದಾರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.

ಚುನಾವಣಾ ವೇಳಾಪಟ್ಟಿ
ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಏಪ್ರಿಲ್ 12ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದೆ. ಏಪ್ರಿಲ್ 20ರಂದು ನಾಮಪತ್ರಗಳ ಪರಿಶೀಲನೆ ಜರುಗಲಿದ್ದು, ಏಪ್ರಿಲ್ 22ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7ರಂದು ಮತದಾನ ಜರುಗಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆ ಜೂನ್ 6ರಂದು ಕೊನೆಗೊಳ್ಳಲಿದೆ.

ಜಿಲ್ಲಾ ದೂರು ನಿರ್ವಹಣಾ ಕೇಂದ್ರ
ಜಿಲ್ಲೆಯಲ್ಲಿ ಯಾವುದೇ ರೀತಿ ದೂರುಗಳ ನಿರ್ವಹಣೆಗಾಗಿ ಸೈಯದ್ ಜೋಹೈಬುಲ್ಲಾ, ಜಿಲ್ಲಾ ವ್ಯವಸ್ಥಾಪಕರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ-ಗದಗ (ಮೊ.ನಂ: 8277944217) ಇವರನ್ನು ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಲಾಗಿದೆ. ಇವರ ಅಧೀನದಲ್ಲಿ Complaint Monitoring Team, cVIGIL ತಂಡ, 1950-ಕಾಲ್ ಸೆಂಟರ್ ಹಾಗೂ ಜಿಲ್ಲಾ ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತವೆ.

ಮತಗಟ್ಟೆ ವಿವರ
ಜಿಲ್ಲೆಯಲ್ಲಿ ಒಟ್ಟು 961 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 65-ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 251, 66-ಗದಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 223, 67-ರೋಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 267 ಹಾಗೂ 68-ನರಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 220 ಮತಗಟ್ಟೆಗಳು ಬರುತ್ತವೆ.

Tags: District Collector Vaishali M.LDistrict Superintendent of Police B.S. NemagowdaGadag Collector Office HallLok Sabha General Electionpress conference
ShareSendShare
Previous Post

ಬೇಡಿಕೆಗನುಗುಣವಾಗಿ ವಿವಿಧೆಡೆ ಮೇವು ಬ್ಯಾಂಕ್

Next Post

ಶಾಖದ ಹೊಡೆತದಿಂದ ಕಾಪಾಡಿಕೊಳ್ಳಿ: ಡಿಸಿ ಸಲಹೆ

News Desk

News Desk

Next Post
heat wave

ಶಾಖದ ಹೊಡೆತದಿಂದ ಕಾಪಾಡಿಕೊಳ್ಳಿ: ಡಿಸಿ ಸಲಹೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

November 9, 2026
ಜೂನ್ ನಂತರ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಉಳಿಯಲ್ಲ: ಎಂ ಲಕ್ಷ್ಮಣ್

ಪೆಟ್ರೋಲ್ ಬೆಲೆ ಲೆಕ್ಕಾಚಾರ ಮುಂದಿಟ್ಟು ಕೇಂದ್ರದ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ!

November 9, 2026
ಕರ್ನಾಟಕದಲ್ಲಿ ಇಂದಿನಿಂದ SIR: ಮತದಾರರ ಬಳಿ ಬಿಎಲ್ಓಗಳು ಕೇಳುವ ದಾಖಲೆಗಳೇನು? ಇಲ್ಲಿದೆ ಮಾಹಿತಿ!

ಎಸ್‌ಐಆರ್ ಎಫೆಕ್ಟ್: ರಾಜ್ಯದಲ್ಲಿ 18.84% ಮುಸ್ಲಿಂ ಮತದಾರರ ಸಂಖ್ಯೆ ಇಳಿಕೆ!

November 9, 2026
ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ; ದೀಪಾವಳಿ ಅಮಾವಾಸ್ಯೆಗೆ ಹರಿದುಬಂದ ಭಕ್ತರು!

ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ; ದೀಪಾವಳಿ ಅಮಾವಾಸ್ಯೆಗೆ ಹರಿದುಬಂದ ಭಕ್ತರು!

November 9, 2026

Recent News

ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

November 9, 2026
ಜೂನ್ ನಂತರ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಉಳಿಯಲ್ಲ: ಎಂ ಲಕ್ಷ್ಮಣ್

ಪೆಟ್ರೋಲ್ ಬೆಲೆ ಲೆಕ್ಕಾಚಾರ ಮುಂದಿಟ್ಟು ಕೇಂದ್ರದ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ!

November 9, 2026
ಕರ್ನಾಟಕದಲ್ಲಿ ಇಂದಿನಿಂದ SIR: ಮತದಾರರ ಬಳಿ ಬಿಎಲ್ಓಗಳು ಕೇಳುವ ದಾಖಲೆಗಳೇನು? ಇಲ್ಲಿದೆ ಮಾಹಿತಿ!

ಎಸ್‌ಐಆರ್ ಎಫೆಕ್ಟ್: ರಾಜ್ಯದಲ್ಲಿ 18.84% ಮುಸ್ಲಿಂ ಮತದಾರರ ಸಂಖ್ಯೆ ಇಳಿಕೆ!

November 9, 2026
ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ; ದೀಪಾವಳಿ ಅಮಾವಾಸ್ಯೆಗೆ ಹರಿದುಬಂದ ಭಕ್ತರು!

ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ; ದೀಪಾವಳಿ ಅಮಾವಾಸ್ಯೆಗೆ ಹರಿದುಬಂದ ಭಕ್ತರು!

November 9, 2026
Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

November 9, 2026
ಜೂನ್ ನಂತರ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಉಳಿಯಲ್ಲ: ಎಂ ಲಕ್ಷ್ಮಣ್

ಪೆಟ್ರೋಲ್ ಬೆಲೆ ಲೆಕ್ಕಾಚಾರ ಮುಂದಿಟ್ಟು ಕೇಂದ್ರದ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ!

November 9, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.