ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸಿದ್ದರಿಂದ ಪಟ್ಟಣದಲ್ಲಿ ಶನಿವಾರ ಪ್ಲೆಕ್ಸ್, ಬ್ಯಾನರ್, ಧ್ವಜ, ಗೋಡೆ ಬರಹ ಹಾಗೂ ಅನಧಿಕೃತ ಜಾಹಿರಾತು ಪ್ಲೆಕ್ಸ್ ಗಳ ತೆರವು ಕಾರ್ಯಾಚರಣೆಯನ್ನು ಮುಖ್ಯಾಧಿಕಾರಿ ಮಹೇಶ ಹಡಪದ ಅವರ ನೇತೃತ್ವದಲ್ಲಿ ನಡೆಸಲಾಯಿತು.
ಪಟ್ಟಣದ ಹಲವೆಡೆ ಪುರಸಭೆಯವರ ಜೆಸಿಬಿ ಮುಖಾಂತರ ಪಕ್ಷದ ಧ್ವಜ ಹಾಗೂ ಬ್ಯಾನರ್ಗಳನ್ನು ಮನೆಗಳ ಮೇಲೆ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ದೀಪದ ಕಂಬಗಳಿಗೆ, ಮರದ ಟೊಂಗೆಗಳಿಗೆ ಕಟ್ಟಿದ್ದ ಧ್ವಜಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ರವಿವಾರದವರೆಗೂ ಮುಂದುವರೆದಿತ್ತು. ಪುರಸಭೆ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್ ಸೇರಿದಂತೆ ಅನೇಕರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.



