ವಿಜಯಸಾಕ್ಷಿ ಸುದ್ದಿ, ಸೊರಬ : ತಾಲೂಕಿನ ದುಗ್ಲಿ ಸುಕ್ಷೇತ್ರದ ಶ್ರೀ ಗುರು ರೇವಣಸಿದ್ಧೇಶ್ವರ ಮಠದಲ್ಲಿ ಮಾ.30ರಂದು ಸಂಜೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ರಥೋತ್ಸವ, ಶ್ರೀ ಮಠದ 48ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜರುಗಲಿದೆ.
ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು ಅಧ್ಯಕ್ಷತೆ ವಹಿಸುವರು.
ದುಗ್ಲಿ-ಕಡೆನಂದಿಹಳ್ಳಿ ಕ್ಷೇತ್ರದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು.
ಬೊಮ್ಮನಹಳ್ಳಿ ವಿರಕ್ತಮಠದ ಶಿವಯೋಗಿ ಸ್ವಾಮಿಗಳು, ಜಡೆ ಮಹಾಂತ ಸ್ವಾಮಿಗಳು, ಶಾಂತಪುರ ಶಿವಾನಂದ ಶಿವಾಚಾರ್ಯರು, ಸಿಂಧನೂರು-ಕನ್ನೂರು ಸೋಮನಾಥ ಶಿವಾಚಾರ್ಯರು, ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯರು, ಕಾರ್ಜುವಳ್ಳಿ ಸದಾಶಿವ ಶಿವಾಚಾರ್ಯರು, ಚನ್ನಗಿರಿ ಕೇದಾರ ಶಿವಶಾಂತವೀರ ಶಿವಾಚಾರ್ಯರು, ಯಲಬುರ್ಗಾದ ಶಿವಲಿಂಗ ಸ್ವಾಮಿಗಳು ಉಪದೇಶಾಮೃತ ನೀಡುವರು.
ಬೆಳಿಗ್ಗೆ ಸ್ವಾಮಿಗಳವರ ಗದ್ದುಗೆಗೆ ಮಹಾರುದ್ರಾಭಿಷೇಕ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ಪಲ್ಲಕ್ಕಿ ಉತ್ಸವ ನಡೆಯುವುದು. ಇದೇ ಸಂದರ್ಭದಲ್ಲಿ ರೇವಣಸಿದ್ಧೇಶ್ವರ ಶಿವಾಚಾರ್ಯರ ಜನ್ಮ ವರ್ಧಂತ್ಯೋತ್ಸವ, ಸರ್ಪ ಶಾಂತಿ ಜರುಗುವುದು. ಸಂಜೆ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ರಥೋತ್ಸವ ಜರುಗಲಿದೆ. ರಾತ್ರಿ ಸಂಗೀತ-ಭರತನಾಟ್ಯ, ವಿಶೇಷ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.
ವಿಶೇಷ ಆಹ್ವಾನಿತರಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಶಿವರಾಮ ಹೆಬ್ಬಾರ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ, ವಿ.ಎಸ್. ಪಾಟೀಲ್, ಕೆ.ಪಿ. ರುದ್ರೇಗೌಡ ಗಿಣಿವಾಲ, ಗಣಪತಿ ಹುಲ್ಲಿಕೊಪ್ಪ, ನಾಗರಾಜಗೌಡ್ರ ಚಿಕ್ಕಾವಲಿ, ಬಸವರಾಜಪ್ಪ ಬಾರಂಗಿ, ಸಿ.ಪಿ. ಈರೇಶಗೌಡ್ರ, ಬಸವರಾಜ ಚಕ್ರಸಾಲಿ, ಶಿವಲಿಂಗಯ್ಯ ಎಸ್.ಅಲ್ಲಯ್ಯನವರಮಠ, ಶಂಕರ್ ಶೇಟ್, ಆನಂದಪ್ಪ, ಲತಾ ಹೆಚ್.ಡಿ., ಮಲ್ಲಮ್ಮ ಕಬ್ಬೂರು, ಚಂದ್ರಪ್ಪ ಹೊಸೂರು, ರೂಪಾ ಪರಶುರಾಮ ಪಾಲ್ಗೊಳ್ಳುವರು.
Advertisement